ಕೇರಳದಲ್ಲಿ ಭೀಕರ ಭೂ ಕುಸಿತ -
ರಾಜ್ಯ

Wayanad landslides: ಪರಿಹಾರ, ರಕ್ಷಣಾ ಕಾರ್ಯಾಚರಣೆ ಸೇರಿ ಕೇರಳಕ್ಕೆ ಸಕಲ ನೆರವು, ಸಹಾಯವಾಣಿ ಆರಂಭ- CM Siddaramaiah

ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಬೆಂಗಳೂರು: ಭೀಕರ ಭೂ ಕುಸಿತ ಸಂಭವಿಸಿರುವ ಕೇರಳಕ್ಕೆ (Kerala) ಪರಿಹಾರ, ರಕ್ಷಣಾ ಕಾರ್ಯಾಚರಣೆ ಸೇರಿ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಜೊತೆಗೆ ವಯನಾಡಿನಲ್ಲಿ ಸಿಲುಕಿರುವವರ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್​ಡಿಆರ್​ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು, ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದರಾಮಯ್ಯ, 'ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಗ್ರೀನ್ ಕಾರಿಡಾರ್!

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡೀಪುರ ಚೆಕ್ ಪೋಸ್ಟ್ನಲ್ಲಿ ಈ ಎನ್​ಡಿಆರ್​ಎಫ್ ಹಾಗೂ ಸೇನೆಯ ತಂಡಗಳಿಗೆ ಪರಿಹಾರ ಹಾಗೂ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ.

ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್​ಗಳನ್ನು ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾಗರಿಕರ ನೆರವಿಗೆ ಸಹಾಯವಾಣಿ

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಪ್ರಯತ್ನ ನಡೆಸುತ್ತಿದ್ದು, ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಚಾಮರಾಜನಗರ ಡಿಸಿ ಕಚೇರಿಯ ಸಹಾಯವಾಣಿ ಸಂಖ್ಯೆ: 08226-223163, 08226-223161, 08226-223160

ವಾಟ್ಸಾಪ್ ಸಂಖ್ಯೆ: 97409 42901

ಸಿದ್ದರಾಮಯ್ಯ ಟ್ವೀಟ್

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿಯಾಗಿರುವ ಬಗ್ಗೆ ಎಕ್ಸ್ (ಟ್ವಿಟರ್)ನಲ್ಲಿ ಸಂತಾಪ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ನೆರೆಯ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕರ್ನಾಟಕ ಬದ್ಧವಾಗಿದೆ ಎಂದು ಹೇಳಿದರು. "ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಹೃದಯವಿದೆ. ಈ ಸವಾಲಿನ ಸಮಯದಲ್ಲಿ ಕೇರಳಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಕರ್ನಾಟಕ ಬದ್ಧವಾಗಿದೆ. ನಾವು ಒಗ್ಗಟ್ಟಾಗಿ ಮತ್ತು ಬಲವಾಗಿ ನಿಲ್ಲೋಣ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

SCROLL FOR NEXT