ಸಂಗ್ರಹ ಚಿತ್ರ 
ರಾಜ್ಯ

ಫ್ಲೆಕ್ಸ್-ಬ್ಯಾನರ್‌ ನಿಯಂತ್ರಣಕ್ಕೆ BBMP ಮುಂದು: ಶೀಘ್ರದಲ್ಲೇ ಠಾಣಾವಾರು ನೋಡಲ್ ಅಧಿಕಾರಿಗಳ ನಿಯೋಜನೆ!

ನಗರದಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುವುದು ಕಂಡುಬಂದರೆ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಬೆಂಗಳೂರು: ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ನಿಯಂತ್ರಣಕ್ಕೆ ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಜಂಟಿ ಕಾರ್ಯಾಚರಣೆಗೆ ಮುಂದಾಗಿದ್ದು, ವಲಯ ವ್ಯಾಪ್ತಿಯ ಪೊಲೀಸ್‌ ಠಾಣಾವಾರು ನೋಡಲ್‌ ಅಧಿಕಾರಿಗಳ ನಿಯೋಜಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹಾಗೂ ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನದ (ಎಸ್‌ಒಪಿ) ಮಾರ್ಗಸೂಚಿಗಳನ್ನು ಹೊರಡಿಸಲು ತೀರ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ನಗರದಲ್ಲಿ ಅನಧಿಕೃವಾಗಿ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕಾಗಿ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಪ್ರಮಾಣಿತ ಕಾರ್ಯಾಚರಣೆಯ ವಿಧಾನವನ್ನು(ಎಸ್‍ಒಪಿ) ಹೊರಡಿಸಲಾಗುತ್ತದೆ.

ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಫ್ರಿಂಟಿಂಗ್ ಯುನಿಟ್ಸ್ ಪಟ್ಟಿ ಮಾಡಿಕೊಂಡು ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಸಹಯೋಗದೊಂದಿಗೆ ಫ್ರಿಂಟಿಂಗ್ ಯುನಿಟ್‍ಗಳಿಗೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸದಂತೆ ಎಚ್ಚರಿಕೆ ನೀಡಬೇಕು. ಪಾಲಿಕೆಯಿಂದ ಅನುಮತಿಯಿಲ್ಲದೆ ಯಾವುದೇ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸಿದಲ್ಲಿ ಅದನ್ನು ವಶಪಡಿಸಿಕೊಂಡು, ದಂಡ ವಿಧಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅನಧಿಕೃತ ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣಾವಾರು ಪಾಲಿಕೆಯಿಂದ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನಿಯೋಜಿಸಬೇಕು. ಇದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಾಧಿಸಲು ಅನುಕೂಲವಾಗಲಿದೆ. ಆದುದರಿಂದ ಕೂಡಲೆ ಪೊಲೀಸ್ ಠಾಣಾವಾರು ಒಬ್ಬ ನೋಡಲ್ ಅಧಿಕಾರಿಯನ್ನು ನಿಯೋಜನೆ ಮಾಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ನಗರದಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುವುದು ಕಂಡುಬಂದರೆ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿ, ನಗರದ ಸಾರ್ವಜನಿಕ ಸ್ಥಳ, ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳಿಂದ ಸಾಕಷ್ಟು ಸಮಸ್ಯೆಗಳಾಗುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆಯ ಜೊತೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ತೆರೆದ ಸ್ಥಳಗಳು ಕಾಯಿದೆ(ಕೆಒಪಿಡಿ) ಜೊತೆಗೆ ಇತರೆ ಕಾಯಿದೆ ಅಡಿಯಲ್ಲಿಯೂ ಅನಧಿಕೃತವಾಗಿ ಫ್ಲೆಕ್ಸ್ ಬ್ಯಾನರ್‍ಗಳನ್ನು ಅಳವಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುವ ಮೂಲಕ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕಲು ಪಾಲಿಕೆ ಜೊತೆ ಕೈ ಜೋಡಿಸಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ಜುಲೈ 1 ರಿಂದ 8,500 ಕ್ಕೂ ಹೆಚ್ಚು ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಮತ್ತು 180 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT