ಸಂಗ್ರಹ ಚಿತ್ರ 
ರಾಜ್ಯ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ: 4 ಅಪ್ರಾಪ್ತರ ಬಂಧನ, ಪೋಷಕರ ವಿರುದ್ಧವೂ ಪ್ರಕರಣ ದಾಖಲು

ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.

ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ.

ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಹಿಂಬಾಲಿಸಿದ ಬಾಲಕರು ಅಡ್ಡಗಟ್ಟಿ 30 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

ಬಳಿಕ ಬ್ಯಾಡರಹಳ್ಳಿ ಪೊಲೀಸರು ಬಾಲಕರನ್ನು ಬಂಧಿಸಿ ಬಾಲ ನ್ಯಾಯ ಮಂಡಳಿಗೆ ಕಳುಹಿಸಿದ್ದರು. ಅಲ್ಲಿಂದ ತಪ್ಪಿಸಿಕೊಂಡಿದ್ದ ಬಾಲಕರು ಮರಳಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದಾರೆ.

ಈ ನಡುವೆ ಪ್ರಕರಣ ಸಂಬಂಧ ಬಾಲಕರ ಪೋಷಕರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮಕ್ಕಳ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ನಾಲ್ವರು ಬಾಲರ ಪೋಷಕರಿಗೆ ಬಾಲ ಅಪರಾಧ ನ್ಯಾಯಿಕ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ