ಒಡಂಬಡಿಕೆಗೆ ಸಹಿ ಹಾಕಿದ ಸಚಿವ ಎಂ.ಬಿ. ಪಾಟೀಲ್ 
ರಾಜ್ಯ

ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ ಹೂಡಿಕೆ, ಒಡಂಬಡಿಕೆಗೆ ಸಹಿ

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು.

ಬೆಂಗಳೂರು: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ. 2,100 ಕೋಟಿ ಹೂಡಲಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸನ್ಸೇರಾ ಎಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 3,500 ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಮತ್ತು ತರಬೇತಿ ಕೇಂದ್ರ ಆರಂಭಿಸಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದ್ದು, ಸ್ಥಳೀಯರ ಕೌಶಲ ವೃದ್ಧಿಯಾಗಲಿದೆ. ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್‌. ಆರ್‌. ಸಿಂಘ್ವಿ ಮತ್ತಿತರರು ಉಪಸ್ಥಿತರಿದ್ದರು.

ಓಟಿಸ್ ಕಂಪನಿಯಿಂದ ರೂ.135 ಕೋಟಿ ಹೂಡಿಕೆ: ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು. ಇದಕ್ಕಾಗಿ ಕಂಪನಿಯು ಹಾರೋಹಳ್ಳಿಯಲ್ಲಿ 12 ಎಕರೆ ಭೂಮಿಯನ್ನು ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ 200ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!