ಸಿಎಂ ಮತ್ತು ಡಿಸಿಎಂ  
ರಾಜ್ಯ

ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ: ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ಮಂಜೂರು

2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ವಿರುದ್ಧ ಕಮಿಷನ್ ಪರ್ಸೆಂಟ್, ಭ್ರಷ್ಠಾಚಾರ ಆರೋಪ ಮಾಡಿ ಪ್ರಚಾರ ಮಾಡಿದ್ದ ಕಾಂಗ್ರೆಸ್

ಬೆಂಗಳೂರು: 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40% ಕಮಿಷನ್ ಮಾಡಿದ ಆರೋಪದಲ್ಲಿ ಶನಿವಾರ ಕೋರ್ಟ್ ಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದೊಂದು ಖಾಸಗಿ ದೂರು ಆಗಿದ್ದು, ಮೊದಲ ಬಾರಿ ವಿಚಾರಣೆಗೆ ಹಾಜರಾಗಿದ್ದೇವೆ. ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀೂನು ಬಾಂಡ್ ಗೆ ಸಹಿ ಹಾಕಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಕೋರ್ಟ್‌ಗೆ ಬಂದ ಸಿಎಂ, ಡಿಸಿಎಂ ಅವರನ್ನು ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಕುಳಿತುಕೊಳ್ಳಲು ಸೂಚಿಸಲಾಯಿತು. ಆದರೆ, ಬೇಡ ಇಲ್ಲೆ ಕೂರ್ತೀವಿ ಎಂದು ಇಬ್ಬರೂ ಹೇಳಿದರು. ಸಾಮಾನ್ಯರಂತೆ ನ್ಯಾಯಾಲಯದ ಹೊರಗಡೆ ಸಿಎಂ ಮತ್ತು ಡಿಸಿಎಂ ಕುಳಿತರು. ನಾಯಕರ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು.

ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು.

2,500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ.

ರಾಹುಲ್ ಗಾಂಧಿ ಗೈರು: ಇಂದು ವಿಚಾರಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೈರು ಹಾಜರಾಗಿದ್ದು, ಅವರಿಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂದು ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಹೊರಬೀಳಲಿದೆ.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT