ಸಾಂಕೇತಿಕ ಚಿತ್ರ online desk
ರಾಜ್ಯ

ಲೋಕಸಭಾ ಚುನಾವಣೋತ್ತರ ಸಮೀಕ್ಷೆ 2024: ರಾಜ್ಯದಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ, ಕಾಂಗ್ರೆಸ್ ಗೆ ಅಲ್ಪ ಲಾಭ!

ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಬೆಂಗಳೂರು: ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಒಟ್ಟು ಹೆಚ್ಚಿನ ಸ್ಥಾನಗಳು ಸಿಗುವುದಿಲ್ಲವಾದರೂ ಕಳೆದ ಲೋಕಸಭಾ ಚುನಾವಣೆಗೆ ಹೋಲಿಕೆ ಮಾಡಿದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸೀಟುಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೂರು ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಗೆ 3-8 ಸ್ಥಾನಗಳು ಸಿಗುವ ಸಾಧ್ಯತೆಗಳಿವೆ.

ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಎನ್ ಡಿಎ ಮೈತ್ರಿಕೂಟಕ್ಕೆ ರಾಜ್ಯದಲ್ಲಿ 23-25 ಸ್ಥಾನಗಳು ಸಿಗಲಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ 3-5 ಸ್ಥಾನಗಳು ಸಿಗಲಿದೆ. ಪಕ್ಷೇತರರು ಖಾತೆ ತೆರೆಯುವ ಸಾಧ್ಯತೆಗಳಿಲ್ಲ.

ಇಂಡಿಯಾ ಟಿವಿ ಸಮೀಕ್ಷೆಯಲ್ಲಿ ಎನ್ ಡಿಎ 19-25 ಕ್ಷೇತ್ರಗಳಲ್ಲಿ ಗೆಲ್ಲಲಿದ್ದು, ಕಾಂಗ್ರೆಸ್ 4-8 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ನ್ಯೂಸ್ 18 ಸಮೀಕ್ಷೆಯ ಪ್ರಕಾರ, ಎನ್ ಡಿಎ 23-26 ಸ್ಥಾನಗಳು ಸಿಗಲಿದ್ದರೆ, ಕಾಂಗ್ರೆಸ್ ಗೆ 3-7 ಸ್ಥಾನಗಳು ಸಿಗಲಿದೆ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿ ಏರ್ಪಟ್ಟಿತ್ತು. 2019 ರಲ್ಲಿ ಬಿಜೆಪಿ 28 ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಆಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!