ಪ್ರಶಸ್ತಿ ಸ್ವೀಕರಿಸಿದ ನಿಮ್ಹಾನ್ಸ್ ನಿರ್ದೇಶಿಕಿ ಪ್ರತಿಮಾ ರೆಡ್ಡಿ 
ರಾಜ್ಯ

NIMHANS ಸಂಸ್ಥೆಗೆ ಪ್ರತಿಷ್ಠಿತ WHO ನೆಲ್ಸನ್ ಮಂಡೇಲಾ ಪ್ರಶಸ್ತಿ

ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ. ಅಂತೆಯೇ ಈ ಪ್ರಶಸ್ತಿಗೆ ನಿಮ್ಹಾನ್ಸ್‌ ಆಸ್ಪತ್ರೆಗೆ ಒಲಿದು ಬಂದಿದೆ. ನಿಮ್ಹಾನ್ಸ್ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ಅವರು ಜಿನೀವಾದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಈ ಪ್ರಶಸ್ತಿಗೆ ಭಾಜನವಾದ ನಿಮ್ಹಾನ್ಸ್‌ ಅಭಿನಂದನೆಗಳನ್ನು ಸಲ್ಲಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ನಿಮ್ಹಾನ್ಸ್ ಅನ್ನು ಅಭಿನಂದಿಸಿದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಭಾರತದ ಪ್ರಯತ್ನಗಳು ಮತ್ತು ಪ್ರವರ್ತಕ ಕೆಲಸವನ್ನು ಗುರುತಿಸಿದ್ದಕ್ಕಾಗಿ ಅವರು ಸಂತಸ ವ್ಯಕ್ತಪಡಿಸಿದರು.

ಪ್ರಶಸ್ತಿಯ ಕುರಿತು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಪ್ರತಿಕ್ರಿಯಿಸಿ, ನಮ್ಮ ಸಾಂಸ್ಥಿಕ ಪ್ರಯಾಣದ ಈ ಹಂತದಲ್ಲಿ ಆರೋಗ್ಯ ಪ್ರಚಾರಕ್ಕಾಗಿ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಸ್ವೀಕರಿಸಲು ನಾವು ಹೆಮ್ಮೆಪಡುತ್ತೇವೆ ಎಂದು ಖುಷಿ ಹಂಚಿಕೊಂಡರು. ಅಲ್ಲದೇ ಇದು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT