ಡಿಕೆ ಶಿವಕುಮಾರ್ online desk
ರಾಜ್ಯ

ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ 2 ಅಂಕಿ ದಾಟಲಿದೆ: ಶಿವಕುಮಾರ್

ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ 2 ಅಂಕಿ ಸಂಖ್ಯೆ ದಾಟಲಿದೆ ಎಂದಷ್ಟೇ ಹೇಳಿರುವ ಡಿಸಿಎಂ ನಿಖರವಾದ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ್ದ ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದರು.

"ಎಕ್ಸಿಟ್ ಪೋಲ್‌ಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ನಾನು ಹೇಳಿದ್ದೇನೆ, ಇಂದು ಸಹ ನಾನು ಅದೇ ಮಾತನ್ನು ಹೇಳುತ್ತಿದ್ದೇನೆ. ಯಾರೋ ಒಬ್ಬರು ನನಗೆ ಕರೆ ಮಾಡಿ ಅವರು (ಚಾನೆಲ್‌ಗಳು) ನಾವು ಎರಡು ಅಥವಾ ಮೂರು ಅಥವಾ ನಾಲ್ಕು ಸ್ಥಾನಗಳನ್ನು ಮಾತ್ರ ಪಡೆಯುತ್ತೇವೆ ಎಂದು ತೋರಿಸುತ್ತಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡು ಅಂಕಿಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ, ಕಾದು ನೋಡಿ, ”ಎಂದು ಶಿವಕುಮಾರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

2019 ರಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು, ಕಾಂಗ್ರೆಸ್ 1, ಜೆಡಿಎಸ್ 1, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್