ಸಿಎಂ ಸಿದ್ದರಾಮಯ್ಯ 
ರಾಜ್ಯ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದು ತಿಳಿಸಿದರು.

ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಅವರು ಬರೆದಿದ್ದಾರೆನ್ನಲಾಗಿದೆ.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT