ಪ್ರಜ್ವಲೇ ರೇವಣ್ಣ, ಪ್ರಹ್ಲಾದ್ ಜೋಶಿ 
ರಾಜ್ಯ

ಪ್ರಜ್ವಲ್ ರೇವಣ್ಣಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆಯಾಚಿಸುತ್ತಿರುವ ಹಿಂದಿನ ಕಾರಣ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದರು. ಪ್ರಜ್ವಲ್ ರೇವಣ್ಣ ಬಂಧನಕ್ಕೂ ಮುನ್ನಾ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಅವರ ಕುಟುಂಬ ಹಾಗೂ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿದ್ದರು.

ಮಹಿಳೆಯರನ್ನು ಬಹಳ ಗೌರವದಿಂದ ಕಾಣುವ ದೇಶದಲ್ಲಿ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಅಸಹ್ಯಕರವಾಗಿದೆ.ಇಲ್ಲಿಯವರೆಗೆ ಪ್ರಜ್ವಲ್ ನಡೆದುಕೊಂಡ ರೀತಿ ಅಕ್ಷಮ್ಯ. ಸಂತ್ರಸ್ತೆಯರಿಂದ ಕ್ಷಮೆಯಾಚಿಸಲಿ ಅಥವಾ ಇಲ್ಲದಿರಲಿ, ಇದು ಗಂಭೀರ ಮತ್ತು ಅಕ್ಷಮ್ಯ ಅಪರಾಧವಾಗಿರುವುದರಿಂದ, ಕಾನೂನಿನ ಪ್ರಕಾರ ಶಿಕ್ಷೆಯನ್ನು ನೀಡಬೇಕು. ಇದು ಬಿಜೆಪಿಯ ಸ್ಪಷ್ಟ ನಿಲುವು ಎಂದು ಜೋಶಿ ಒತ್ತಿ ಹೇಳಿದರು.

ಭಾರತದ ನ್ಯಾಯಾಂಗ ವ್ಯವಸ್ಥೆಯು ಶಕ್ತಿಯುತವಾಗಿದೆ ಮತ್ತು ತನಿಖೆಯನ್ನು ತ್ವರಿತವಾಗಿ ನಡೆಸಬೇಕು. ಪ್ರಜ್ವಲ್‌ಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಜೋಶಿ, ಕಳೆದ ಚುನಾವಣೆಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ. ಈ ಬಾರಿಯೂ ಮತದಾರರು ನನ್ನೊಂದಿಗಿದ್ದು, ಹೆಚ್ಚಿನ ಅಂತರದಿಂದ ಗೆಲುವು ನನ್ನತ್ತ ಬರಲಿದೆ ಎಂದು ಅವರು ಪ್ರತಿಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!