ಸಂಗ್ರಹ ಚಿತ್ರ 
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳು SIT ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಎಸ್ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿಸಿವೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ಈ ಇಬ್ಬರು ಅಧಿಕಾರಿಗಳು ತಲೆ ನೋವಾಗಿ ಪರಣಮಿಸಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಅವರು ಬರೆದಿದ್ದಾರೆನ್ನಲಾಗಿದೆ.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ