ಸಂಗ್ರಹ ಚಿತ್ರ 
ರಾಜ್ಯ

ಬೇಗೂರು: 16 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಆರೋಪಿ ಬಂಧನ

ಕಸ ವಿಂಗಡಣೆ ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಕಸ ವಿಂಗಡಣೆ ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆ ಶಾಹೀನ್ ಶೇಖ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಬಾಲಕಿಯ ತಂದೆ ನೀಡಿದ್ದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳದ ನೊಯ್ಡಾ ಜಿಲ್ಲೆಯ ನಿವಾಸಿಯಾದ ಶಹೀನ್ ಹಾಗೂ ಆತನ ಪತ್ನಿ ಮೀಮ್ ರನ್ನು ಬಂಧಿಸಲಾಗಿದೆ.

ಮೇ.17ರ ರಾತ್ರಿ ಶಹೀನ್ ಪತ್ನಿ ಮೀಮ್ ಮಧ್ಯರಾತ್ರಿ 12.30ರ ಸುಮಾರಿಗೆ ಸಂತ್ರಸ್ಥ ಬಾಲಕಿಗೆ ಟೀ ಮಾಡುವಂತೆ ತಿಳಿಸಿ, ಬಾಲಕಿ ಶೆಡ್ ಒಳಗೆ ಹೋದಾಗ ಉದ್ದೇಶಪೂರ್ವಕವಾಗಿ ಬಾಗಿಲು ಲಾಕ್ ಮಾಡಿದ್ದಳು. ಈ ವೇಳೆ ಶಹೀನ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಎಂದು ಮರುದಿನ ಪುತ್ರಿ ನಮಗೆ ಈ ಬಗ್ಗೆ ತಿಳಿಸಿದ್ದಳು ಎಂದು ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆು.

ಪ್ರಕರಣ ಸಂಬಂಧ ಶಾಹೀನ್ ಹಾಗೂ ಆತನ ಪತ್ನಿಯನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದ್ದು. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್