ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಜೂನ್‌ 6 ಮತ್ತು 7ರಂದು ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB

ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮೊದಲ ಹಂತದಲ್ಲಲಿ ಕಾವೇರಿ 1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 6 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕಾಮಗಾರಿ ನಡೆಸುವುದರಿಂದ 12 ಗಂಟೆ ನೀರು ಪೂರೈಕೆ ಇರುವುದಿಲ್ಲ.

ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್‌ನಲ್ಲಿ ಅದೇ ದಿನ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸಹಕರಿಸುವಂತೆ ಜನಮಂಡಳಿ ಮನವಿ ಮಾಡಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ಧತೆ ನಡೆಸಿದೆ. 110 ಗ್ರಾಮಗಳಿಗೆ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!