ಬೆಂಗಳೂರು: ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕನೊಬ್ಬನನ್ನು ನಗರದ ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದು, ಆರೋಪಿಯಿಂದ ರೂ.: 2.6 ಲಕ್ಷ ಮೌಲ್ಯದ ವಾಹನಗಳು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಶಿವಾಜಿನಗರ ನಿವಾಸಿ ಶಾಬಾಜ್ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಎಸ್‌ಎಸ್‌ಎಲ್‌ಸಿ ಓದಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆ ನಡೆಸಿದಾಗ ಕಳ್ಳತನವಾಗಿರುವ ಬೈಕ್‌ಗಳು ಮತ್ತು ಮೊಬೈಲ್‌ಗಳ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಈತನ ವಿರುದ್ಧ ಹಲಸೂರು ಠಾಣೆಯಲ್ಲಿ ಮೂರು, ಹೊಸಕೋಟೆ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ.
ಆರೋಪಿಗಳಿಂದ 2.6 ಲಕ್ಷ ರೂಪಾಯಿ ಮೌಲ್ಯದ ಮೂರು ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.