ವಿಧಾನಪರಿಷತ್ (ಸಾಂಕೇತಿಕ ಚಿತ್ರ) online desk
ರಾಜ್ಯ

Karnataka MLC polls: 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಸಾಧ್ಯತೆ

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಅಭ್ಯರ್ಥಿಗಳು ಸೋಮವಾರ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಅಭ್ಯರ್ಥಿಗಳು ಸೋಮವಾರ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ದ್ವೈವಾರ್ಷಿಕ ಚುನಾವಣೆಗಳಲ್ಲಿ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗುವ ವಿಧಾನಪರಿಷತ್ ನ 11 ಸ್ಥಾನಗಳಿಗೆ ಜೂ.13 ರಂದು ಚುನಾವಣೆ ನಡೆಯಲಿದೆ.

ಮೇ.03 ರಂದು ನಾಮಪತ್ರ ಸಲ್ಲಿಸುವುದಕ್ಕೆ ಕೊನೆಯ ದಿನವಾಗಿತ್ತು. ವಿಧಾನಸಭೆಯಲ್ಲಿ ಈಗಿರುವ ಸಂಖ್ಯಾಬಲದ ಪ್ರಕಾರ, ಕಾಂಗ್ರೆಸ್ 7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಿಲ್ಕಿಸ್ ಬಾನೊ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಸಲಹೆಗಾರ ಕೆ.ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಮಾಜಿ ಎಂಎಲ್ಸಿ ಐವನ್ ಡಿಸೋಜಾ, ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರನ್ನು ಆಡಳಿತಾರೂಢ ಕಾಂಗ್ರೆಸ್ ಕಣಕ್ಕಿಳಿಸಿದೆ.

ಬಿಜೆಪಿಯು ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಎಂಎಲ್‌ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಪಕ್ಷದ ನಾಯಕ ಎಂ ಜಿ ಮುಳೆ ಅವರನ್ನು ತನ್ನ ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ. ಜೆಡಿಎಸ್ ಗೆಲ್ಲಬಹುದಾದ ಏಕೈಕ ಸ್ಥಾನಕ್ಕೆ ತನ್ನ ಪರಾಜಿತ ಯಶವಂತಪುರ ಶಾಸಕ ಟಿ ಎನ್ ಜವರಾಯಿ ಗೌಡ ಅವರ ಹೆಸರನ್ನು ಸೂಚಿಸಿದೆ.

11 ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್‌ನ ಆರ್‌ಎಂ ಆಸಿಫ್ ಪಾಷಾ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅಧಿಕೃತ ಮೂಲಗಳ ಪ್ರಕಾರ, ಮಂಗಳವಾರದ ಪರಿಶೀಲನೆಯ ಸಮಯದಲ್ಲಿ ಅವರ ಉಮೇದುವಾರಿಕೆಯನ್ನು ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ, ಏಕೆಂದರೆ ಅವರ ನಾಮನಿರ್ದೇಶನವು ಪ್ರತಿಪಾದಕರ ಮಾನ್ಯ ಸಹಿ ಮತ್ತು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಅವರನ್ನು ಅನುಮೋದಿಸುವ ಪಕ್ಷದಿಂದ 'ಬಿ ಫಾರ್ಮ್' ನ್ನು ಹೊಂದಿಲ್ಲ.

"ಆದ್ದರಿಂದ, ಪರಿಶೀಲನೆ ಪೂರ್ಣಗೊಂಡ ನಂತರ ಎಲ್ಲಾ 11 ಅಧಿಕೃತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT