ನಟಿ ಹೇಮಾ 
ರಾಜ್ಯ

ಬೆಂಗಳೂರು ರೇವ್ ಪಾರ್ಟಿ ಕೇಸ್: ನಟಿ ಹೇಮಾಗೆ ನ್ಯಾಯಾಂಗ ಬಂಧನ, ನಾನು ತಪ್ಪು ಮಾಡಿಲ್ಲ ಎಂದ 'ಡ್ರಾಮಾ ಕ್ವೀನ್'!

ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಇಂದು ಬುರ್ಕಾ ಧರಿಸಿದ್ದ ಬಂಧಿದ್ದ ಹೇಮಾ ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನಲೆಯಲ್ಲಿ ನಟಿಯನ್ನು ಬಂಧಿಸಿದ್ದಾರೆ.

ನಟಿ ಹೇಮಾರನ್ನು ಬಂಧಿಸಿದ ಸಿಸಿಬಿ ಪೊಲೀಸರು ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ನಂತರ ನ್ಯಾಯಾಧೀಶರಾದ ಎ.ಎಸ್ ಸಲ್ಮಾಅವರ ಮುಂದೆ ಹಾಜರುಪಡಿಸಿದ್ದು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಮುಂದೆ ಮಾತನಾಡಿದ ನಟಿ, ನಾನು ಯಾವುದೇ ತಪ್ಪು ಮಾಡಿಲ್ಲ. ಮಾಧ್ಯಮಗಳಲ್ಲಿ ತಪ್ಪು ವರದಿ ಹರಡಲಾಗುತ್ತಿದೆ ಎಂದು ಆರೋಪಿಸಿದರು.

ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ ಎಂಟು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ ಹೇಮಾ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಇಂದು ನಟಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಇತ್ತೀಚೆಗಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ದಾಳಿ ನಡೆಸಿ, ಸ್ಥಳದಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.

ಪ್ರಕರಣದಲ್ಲಿ ತೆಲುಗು ನಟಿಯನ್ನು ರಕ್ಷಿಸುವಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರಭಾವಿಗಳಿಂದ ಒತ್ತಡ ಹೇರಲಾಗುತ್ತಿದೆ. ಬಂಧಿತ ವ್ಯಕ್ತಿಗಳು ಹೆಚ್ಚು ಸಂಪರ್ಕ ಹೊಂದಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಮತ್ತು ಪ್ರಕರಣದಲ್ಲಿ ಹೆಚ್ಚಿನ ತನಿಖೆಯು ಸಂಭವನೀಯ ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!