ಲೋಕಸಭಾ ಚುನಾವಣೆ 2024 ಫಲಿತಾಂಶ (ಸಂಗ್ರಹ ಚಿತ್ರ) 
ರಾಜ್ಯ

LokSabha Election 2024 Results: ಕರ್ನಾಟಕದ 29 ಮತ ಎಣಿಕೆ ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ನಾಳೆ ಮದ್ಯ ಮಾರಾಟ ಇಲ್ಲ!

ಹಾಲಿ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆಗಾಗಿ 29 ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣಗೊಂಡಿದ್ದು, 13,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಮತಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದಲ್ಲದೆ ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳ ಇತರ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆದಿತ್ತು. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ತಲಾ ಒಂದು ಮತ ಎಣಿಕೆ ಕೇಂದ್ರವಿದ್ದು, ತುಮಕೂರಿನಲ್ಲಿ ಎರಡು ಕಡೆ ಮತ ಎಣಿಕೆ ನಡೆಯಲಿದ್ದು, ಹೀಗಾಗಿ ಒಟ್ಟು 29 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ಕುರಿತು ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, "ನಾವು ಕರ್ನಾಟಕ 28 ಲೋಕಸಭಾ ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ರಾಜ್ಯದ 29 ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗುತ್ತದೆ. ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕರು ಮತ್ತು ಸೂಕ್ಷ್ಮ ವೀಕ್ಷಕರು ಸೇರಿದಂತೆ ಒಟ್ಟು 13,173 ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿಸ್ತೃತ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ತರಬೇತಿ ಕೂಡ ಪೂರ್ಣಗೊಂಡಿದೆ.

ಪ್ರತಿ ಎಣಿಕೆ ಕೇಂದ್ರದಲ್ಲಿ ಇವಿಎಂಗಳು ಮತ್ತು ಅಂಚೆ ಮತಪತ್ರಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಎಣಿಕೆ ಮಾಡಲಾಗುತ್ತದೆ. ಈ ಪ್ರತಿಯೊಂದು ಎಣಿಕೆ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಮಾಧ್ಯಮ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿದೆ. ಇಲ್ಲಿ ಕಂಪ್ಯೂಟರ್ ಗಳು, ಜೆರಾಕ್ಸ್, ಫ್ಯಾಕ್ಸ್, ಪ್ರಿಂಟರ್‌ಗಳು ಇರಲಿವೆ. ಇದರಿಂದ ಅವರು ಆಯಾ ಮಾಧ್ಯಮಗಳಿಗೆ ವರದಿ ಮಾಡಬಹುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಭದ್ರತೆಗೆ 2,400 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಇನ್ನು ಪೊಲೀಸರ ಪ್ರಕಾರ, ಬೆಂಗಳೂರಿನಲ್ಲೇ 2,400 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ರಾಜಧಾನಿಯ ಮೂರು ಎಣಿಕೆ ಕೇಂದ್ರಗಳಾದ ವಸಂತನಗರ (ಬೆಂಗಳೂರು ಕೇಂದ್ರ ಕ್ಷೇತ್ರ), ಸೆಂಟ್ ಜೋಸೆಫ್ ಹೈಸ್ಕೂಲ್ (ಉತ್ತರ ಕ್ಷೇತ್ರ) ವಿಠಲ್ ಮಲ್ಯ ರಸ್ತೆಯಲ್ಲಿ ನಿಯೋಜಿಸಲಾಗಿದೆ.

ಜಯನಗರದ SSMRV ಕಾಲೇಜು (ಬೆಂಗಳೂರು ದಕ್ಷಿಣ ಕ್ಷೇತ್ರ) ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವ್ಯಾಪ್ತಿಯಲ್ಲಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಬಿಗಿ ಭದ್ರತೆಯಲ್ಲಿ ಸುಗಮವಾಗಿ ಮತ ಎಣಿಕೆ ನಡೆಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಮನೋಜ್ ಕುಮಾರ್ ಮೀನಾ ಹೇಳಿದರು.

ಮತ ಎಣಿಕೆ ದಿನ ಅಂದರೆ ನಾಳೆ ಬೆಂಗಳೂರು ನಗರ ಪೊಲೀಸ್ ಘಟಕದಿಂದ ಒಟ್ಟು 1,524 ಅಧಿಕಾರಿಗಳು/ಸಿಬ್ಬಂದಿಗಳು, 13 ಸಶಸ್ತ್ರ ಮೀಸಲು ಘಟಕಗಳು ಮತ್ತು ನಾಲ್ಕು ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಈಗಾಗಲೇ 516 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಮೂರು ಪಾಳಿಯಲ್ಲಿ ಮತ ಯಂತ್ರ ಕೊಠಡಿ ಭದ್ರತಾ ಕರ್ತವ್ಯಕ್ಕೆ ಸಿವಿಲ್ ಮತ್ತು ಸಿಟಿ ಸಶಸ್ತ್ರ ಮೀಸಲು ವಿಭಾಗಗಳು, ಸಿವಿಲ್ ಮತ್ತು ನಗರ ಸಶಸ್ತ್ರ ಮೀಸಲು ವಿಭಾಗಗಳ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಸಂಚಾರಕ್ಕೆ ಅಡ್ಡಿಯಾಗದಂತೆ 400ಕ್ಕೂ ಹೆಚ್ಚು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ನಗರದ ಒಟ್ಟು 2,400ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮೂರು ಮತ ಎಣಿಕೆ ಕೇಂದ್ರಗಳಲ್ಲಿ ಪರಿಸ್ಥಿತಿಯ ನಿಗಾ ವಹಿಸಲಾಗಿದೆ ಎಂದರು.

ನಾಳೆ ಮದ್ಯ ಮಾರಾಟ ಬಂದ್

ಇನ್ನು ಸೋಮವಾರ ಮಧ್ಯರಾತ್ರಿಯಿಂದ ಅಂದರೆ ಇಂದು ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ, ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಮತ್ತು ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 6 ರಿಂದ ಮಂಗಳವಾರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 CrPC ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಮತ್ತು ನಗರ ಸಶಸ್ತ್ರ ಮೀಸಲು ತುಕಡಿಗಳನ್ನು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT