ಶ್ರೇಯಸ್ ಪಟೇಲ್- ಪ್ರಜ್ವಲ್ ರೇವಣ್ಣ online desk
ರಾಜ್ಯ

ಲೋಕಸಭಾ ಚುನಾವಣೆ ಮತ ಎಣಿಕೆ: ಪ್ರಜ್ವಲ್ ಸ್ಪರ್ಧಿಸಿರುವ ಹಾಸನದಲ್ಲಿ ಹೆಚ್ಚಿದ ಕುತೂಹಲ

ಲೋಕಸಭಾ ಚುನಾವಣೆ ಮತ ಎಣಿಕೆ ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ.

ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ.

ಲೈಂಗಿಕ ಹಗರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನ ಮಾಜಿ ನಾಯಕ ಜಿ ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ.

ರಾಜ್ಯದಲ್ಲಿ ಇಬ್ಬರು ದಿಗ್ಗಜ ನಾಯಕರ ಮೊಮ್ಮಕಳ ನಡುವಿನ ಸ್ಪರ್ಧೆ ಇದಾಗಿದೆ. 12 ಪಕ್ಷೇತರರೂ ಸೇರಿ ಒಟ್ಟು 15 ಅಭ್ಯರ್ಥಿಗಳು ಈ ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಫಲಿತಾಂಶದ ಬಗ್ಗೆ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ನಾಯಕರು ಸೇರಿದಂತೆ ಎಲ್ಲಾ ವರ್ಗಗಳಲ್ಲಿ ಕುತೂಹಲ ಹೆಚ್ಚಾಗಿದೆ. ಅಚ್ಚರಿಯೆಂಬಂತೆ ರಾಜಕೀಯ ವಿಶ್ಲೇಷಕರು ಸಹ ಈ ಕ್ಷೇತ್ರದ ಫಲಿತಾಂಶವನ್ನು ಅಂದಾಜಿಸುವಲ್ಲಿ ಸವಾಲು ಎದುರಿಸುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ವಿಷಯ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ ಮತ್ತು ಹಾಸನ ನಗರ ಕ್ಷೇತ್ರದಲ್ಲಿ ಮಾತ್ರ ಪರಿಣಾಮ ಬೀರಬಹುದು ಎಂದು ಜೆಡಿಎಸ್ ಮುಖಂಡರು ಹೇಳುತ್ತಾರೆ. ಸೆಕ್ಸ್ ಹಗರಣದ ವಿಷಯವು ಕಾಳ್ಗಿಚ್ಚಿನಂತೆ ಹರಡಿದೆ ಮತ್ತು ಜನರು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರ ಅಭಿಪ್ರಾಯ.

ರಾಷ್ಟ್ರೀಯ ಪಕ್ಷಗಳ ಯಾವುದೇ ಅಭ್ಯರ್ಥಿಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಡಲಿದ್ದು, ಗೆಲುವಿನ ಅಂತರ ಅಲ್ಪ ಮತಗಳದ್ದಾಗಿರುತ್ತದೆ ಎಂದು ಹೇಳಲಾಗುತ್ತಿದೆ. ಎನ್ ಡಿಎ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ 50.50 ಅವಕಾಶಗಳಿವೆ. ಕುತೂಹಲಕಾರಿಯಾಗಿ ಜೆಡಿಎಸ್ ನಾಯಕರು ಪ್ರಜ್ವಲ್ ಲೈಂಗಿಕ ಹಗರಣವನ್ನು ಮರೆತು ಒಂದು ಲಕ್ಷಕ್ಕೂ ಹೆಚ್ಚು ಮುನ್ನಡೆಯ ನಿರೀಕ್ಷೆಯಲ್ಲಿದ್ದಾರೆ ಮತ್ತು ಅದೇ ರೀತಿ ಕಾಂಗ್ರೆಸ್ ನಾಯಕರು ಐವತ್ತು ಸಾವಿರಕ್ಕೂ ಹೆಚ್ಚು ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಪ್ರಜ್ವಲ್ ಲೈಂಗಿಕ ಹಗರಣದ ಪ್ರಭಾವ ಮತ್ತು ಜಿಲ್ಲೆಯಲ್ಲಿ ಜನಪ್ರಿಯ ಗ್ಯಾರೆಂಟಿ ಯೋಜನೆಗಳನ್ನು ಜನರು ವ್ಯಾಪಕವಾಗಿ ಸ್ವೀಕರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಫಲಿತಾಂಶಗಳು ಸಾಬೀತುಪಡಿಸುತ್ತವೆ. ಹಾಸನ ಲೋಕಸಭೆ ಕ್ಷೇತ್ರ ಒಕ್ಕಲಿಗ ಪ್ರಬಲ ಕ್ಷೇತ್ರವಾಗಿದ್ದು, ಮೂರು ದಶಕಗಳಿಂದ ಒಕ್ಕಲಿಗ ನಾಯಕ ಎಚ್.ಡಿ.ದೇವೇಗೌಡ ಮತ್ತು ಅವರ ಪಕ್ಷ ಜೆಡಿಎಸ್ ನ್ನು ಜನರು ಬೆಂಬಲಿಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಭದ್ರಕೋಟೆಯಲ್ಲಿ ಜೆಡಿಎಸ್‌ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆಯಾಗಿರಲಿದೆ ಎಂದು 2024ರ ಸಂಸದೀಯ ಚುನಾವಣೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT