ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

ವಿಧಾನಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ, ಸಿಎಂ, ಡಿಸಿಎಂ ಸಾಥ್!

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿ ಫಾರಂ ನೀಡಿದರು. ನಂತರ ಪಕ್ಷದ ಮುಖಂಡರ ಸಮ್ಮುಖದಲ್ಲಿ ಯತೀಂದ್ರ ನಾಮಪತ್ರ ಸಲ್ಲಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳನ್ನು ಕಾಂಗ್ರೆಸ್​ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ನಿನ್ನೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ