ಪಿ.ಸಿ. ಮೋಹನ್ 
ರಾಜ್ಯ

ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆಲುವು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆದ್ದೆ ಗೆಲ್ಲುತ್ತಾರೆ ಎನ್ನಲಾಗುತಿತ್ತು.

ಆದರೆ, ಅಂತಿಮ ಹಂತದಲ್ಲಿ ವಿಜಯಲಕ್ಷ್ಮಿ ಪಥ ಬದಲಾಯಿಸಿದ್ದು, ಮಹದೇವಪುರ, ಸಿ.ವಿ.ರಾಮನ್ ನಗರದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ‌ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.

ಒಂದೂವರೆ ದಶಕಗಳ ಇತಿಹಾಸ ಹೊಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಆರಂಭದಿಂದಲೂ ಬಿಜೆಪಿಯೇ ಗೆಲುವು ಸಾಧಿಸುತ್ತಿದೆ. ಮಾತ್ರವಲ್ಲದೇ, ಒಬ್ಬರೇ ಸಂಸದರಾಗಿ ಮುಂದುವರೆದಿರುವುದು ವಿಶೇಷ.

2019 ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಮೋಹನ್ 70,968 ಮತಗಳ ಅಂತರದಿಂದ ಕಾಂಗ್ರೆಸ್​ನ ರಿಜ್ವಾನ್ ಅರ್ಷದ್ ವಿರುದ್ಧ ಗೆಲುವು ಸಾಧಿಸಿದ್ದರು. ಸದ್ಯ ಈ ಬಾರಿ ಮೊದಲ ಬಾರಿಗೆ ಕಾಂಗ್ರೆಸ್​ನಿಂದ ಮನ್ಸೂರ್ ಅಲಿ ಖಾನ್ ಸ್ಪರ್ಧಿಸಿದ್ದು ಪಿ.ಸಿ.ಮೋಹನ್ ಮತ್ತೊಮ್ಮೆ ಗೆದ್ದು 4ನೇ ಬಾರಿ ಸಂಸದರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್