ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಭಾರೀ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 67 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಸುತ್ತಿನ ಮತ ಏಣಿಕೆಯಲ್ಲಿ ಡಾ. ಸಿಎನ್ ಮಂಜುನಾಥ್, ಡಿಕೆ ಸುರೇಶ್ ವಿರುದ್ಧ 67,017 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಅವರು 2,19,880 ಮತಗಳನ್ನು ಪಡೆದಿದ್ದರೆ, ಡಿಕೆ.ಸುರೇಶ್ ಅವರು 1,52,863 ಮತಗಳನ್ನು ಪಡೆದಿದ್ದಾರೆ.
ಇಲ್ಲಿ ಕಾಂಗ್ರೆಸ್‌ನ ಡಿಕೆ ಸುರೇಶ್ ಸತತ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಅವರನ್ನು ಶತಾಯ ಗತಾಯ ಸೋಲಿಸಲೇಬೇಕು ಎಂದು ಕುಮಾರಸ್ವಾಮಿ ಹಾಗೂ ಗೌಡರ ಕುಟುಂಬ ಪಣತೊಟ್ಟಿದೆ. ಹೀಗಾಗಿ ಡಿಕೆಶಿ ಹಾಗೂ ದೊಡ್ಡ ಗೌಡರ ಕುಟುಂಬ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.
ಈ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ, ಇದರಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ನ ಡಿಕೆ ಸುರೇಶ್ ಹಾಗೂ ಖ್ಯಾತ ವೈದ್ಯ, ಜಯದೇವ ಆಸ್ಪತ್ರೆಯ ಮಾಜಿ ಮುಖ್ಯಸ್ಥ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.