ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಇಲ್ಯಾಸ್‌ನಗರ ಬಳಿ ಭಾನುವಾರ ನಡೆದಿದೆ.
ಪೊಲೀಸರ ಪ್ರಕಾರ, ಶಿವಮೊಗ್ಗದ ಕುಂಬಾರಗುಂಡಿ ನಿವಾಸಿ ಎಸ್‌ಬಿ ನಂದನ್ ಹಲ್ಲೆಗೊಳಗಾದ ವ್ಯಕ್ತಿ.
ಈತ ನಗರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಮುಸ್ಲಿಂ ಯುವತಿ ಕೂಡ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುಸ್ಲಿಂ ಯುವಕರ ತಂಡ ಅವರನ್ನು ಅಡ್ಡಗಟ್ಟಿದ್ದಾರೆ.
ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಇನ್ನೊಮ್ಮೆ ಯುವತಿಯ ಜೊತೆ ಕಂಡರೆ ಕೊಲೆ ಮಾಡುತ್ತೇವೆ ಎಂದು ಗ್ಯಾಂಗ್ ನಂದನ್‌ಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದೆ. ಸಂತ್ರಸ್ತನನ್ನು ನಗರದ ಮೆಕ್‌ಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.