ಪ್ರಾತಿನಿಧಿಕ ಚಿತ್ರ 
ರಾಜ್ಯ

ಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ ನಾಲ್ವರು ಚಾರಣಿಗರು ಸಾವು

ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೇಳಿದರು.

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಗರ್ವಾಲ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ದುರಂತದಲ್ಲಿ ಸಾವಿಗೀಡಾದವರ ಗುರುತು ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅನ್ನು ಸಹ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ರಶ್ಮಿ ಮಹೇಶ್ ಹೇಳಿದರು.

ಈ ಟ್ರೆಕ್ಕಿಂಗ್ ಅನ್ನು ಇಂಡಿಯನ್ ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!