ಹತ್ಯೆ (ಸಾಂಕೇತಿಕ ಚಿತ್ರ) 
ರಾಜ್ಯ

ಹಾಸನ: ಹಾಡಹಗಲೇ ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಹಾಸನ: ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿ ಚಕ್ರ ವಾಹನದಲ್ಲಿ ಹೊರಟಿದ್ದ ರವಿಯನ್ನು ಹಿಂದಿನಿಂದ ವಾಹನ ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ದಾಳಿ ನಡೆಸಿದ್ದು, ಪರಿಣಾಮ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹಿಮ್ಸ್‌ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. 2 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ, ವಾರಕ್ಕೆ $ 3 ಬಿಲಿಯನ್ ವೆಚ್ಚ!

T20 ವಿಶ್ವಕಪ್ 2026, 2ನೇ ಸೆಮಿಫೈನಲ್: ಪಿಚ್ ನೋಡಿ ಖುಷಿ ಪಟ್ಟ ಇಂಗ್ಲೆಂಡ್, ಭಾರತಕ್ಕೆ ಆತಂಕ! ಟಾಸ್ ಗೆದ್ದೋನೆ ಬಾಸ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ವಿಧಾನಸಭೆ ಚುನಾವಣೆಗೂ ಮುನ್ನ ಅಸ್ಸಾಂನ ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ಸೇರ್ಪಡೆ

SCROLL FOR NEXT