ಸಂಗ್ರಹ ಚಿತ್ರ 
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣ ಸಹಕಾರ ಬ್ಯಾಂಕ್‌ ಅಧ್ಯಕ್ಷನ ಬಂಧನ; ಅವ್ಯವಹಾರದಲ್ಲಿ ನೆರೆರಾಜ್ಯದ ನಂಟು ದೃಢ!

ಬಂಧಿತ ವ್ಯಕ್ತಿಯನ್ನು ಸತ್ಯನಾರಾಯಣ ಎಂದು ಗುರ್ತಿಸಲಾಗಿದ್ದು, ಇವರು ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಬಂಧನಕ್ಕೊಳಪಡಿಸಿದ್ದು, ಈ ಮೂಲಕ ಅವ್ಯವಹಾರದಲ್ಲಿ ನೆರೆರಾಜ್ಯದ ನಂಟು ದೃಢವಾದಂತಾಗಿದೆ.

ಬಂಧಿತ ವ್ಯಕ್ತಿಯನ್ನು ಸತ್ಯನಾರಾಯಣ ಎಂದು ಗುರ್ತಿಸಲಾಗಿದ್ದು, ಇವರು ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆಂದು ತಿಳಿದುಬಂದಿದೆ.

ಬಂಧಿತ ಸತ್ಯನಾರಾಯಣ ಅವರನ್ನು ಮಂಗಳವಾರ ರಾಜ್ಯಕ್ಕೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಮೂಲಗಳು ತಿಳಿಸಿವೆ.

ಸೋಮವಾರ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ವಸಂತನಗರದಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ, ಹಗರಣಕ್ಕೆ ಸಂಬಂಧಿಸಿದ ಡಿಜಿಟಲ್ ಮತ್ತು ಪೇಪರ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಹಣ ವರ್ಗಾವಣೆಯಾಗಿರುವ 14 ಬ್ಯಾಂಕ್ ಖಾತೆಗಳನ್ನು ಪೊಲೀಸರು ಸ್ಥಗಿತಗೊಳಿಸಿದ್ದು, ತನಿಖೆಗಾಗಿ ತಂಡವನ್ನು ಹೈದರಾಬಾದ್‌ಗೆ ಕಳುಹಿಸಿದ್ದಾರೆ.

ಮೇ 31 ರಂದು ಬೆಂಗಳೂರು ಹೊರವಲಯದಲ್ಲಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ ಪದ್ಮನಾಭ ಮತ್ತು ಅಕೌಂಟ್ಸ್ ಅಧಿಕಾರಿ ಪರಶುರಾಮ್ ಜಿ ಅವರನ್ನು ಪೊಲೀಸರು ಬಂಧಿಸಿ ಶನಿವಾರ ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದದ್ದರು. ನ್ಯಾಯಾಲಯ ಅವರನ್ನು ಜೂನ್ 6ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಅವರು ಬರೆದಿದ್ದಾರೆನ್ನಲಾಗಿದೆ. ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ.

ಈ ನಡುವೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಎಸ್ಟಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎಫ್ ಐಆರ್ ದಾಖಲಿಸಿದೆ. ಬ್ಯಾಂಕ್ ಸಿಬಿಐಗೆ ಪತ್ರ ಬರೆದಿತ್ತು. 3 ಕೋಟಿಗೂ ಹೆಚ್ಚು ಹಗರಣ ನಡೆದರೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬಹುದು ಎಂಬ ಕಾನೂನು ಇದೆ. ಅದರಂತೆ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ತಿಳಿಸಿದ್ದರು.

ಐವರು ಅಧಿಕಾರಿಗಳ ವಿರುದ್ಧ FIR ದಾಖಲು

ಈ ನಡುವೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಈ ಪ್ರಕರಣ ವಿಶೇಷ ತನಿಖಾ ತಂಡ ಸಿಬಿಐಗೆ ವರ್ಗಾವಣೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದ್ದು, ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿಯಿಂದ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದರೆ, ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT