ಮಾಜಿ ರಾಷ್ಚ್ರಪತಿ ರಾಮನಾಥ್ ಕೋವಿಂದ್ ದಂಪತಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!

ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಬೆಂಗಳೂರು: ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಈ ವರ್ಷದ ಧ್ಯೇಯವಾಕ್ಯವಾಗಿದೆ.

1972ರಲ್ಲಿ ಜೂನ್‌ 5 ರಂದು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಮಾನವ ಪರಿಸರ ಸಂಬಂಧದ ಕುರಿತು ವಿಶ್ವಸಂಸ್ಥೆಯು ಸಮ್ಮೇಳನವೊಂದನ್ನು ನಡೆಸಿತ್ತು. ಈ ದಿನವನ್ನು ಗೌರವಿಸಿ 1973ರಲ್ಲಿ ಪ್ರಪಂಚದಾದ್ಯಂತದ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಆ ದಿನವನ್ನು ವಿಶ್ವ ಪರಿಸರ ದಿನ ಎಂದು ಆಚರಿಸುತ್ತಾ ಬರಲಾಗಿದೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರಾಜಭವನದ ಆವರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!