ಮೃತಪಟ್ಟವರು 
ರಾಜ್ಯ

ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ, ನಾಳೆ ಬೆಂಗಳೂರಿಗೆ ಮೃತದೇಹ ರವಾನೆ

ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಒಂಬತ್ತು ಚಾರಣಿಗರ ಮೃತದೇಹಗಳನ್ನು ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಒಂಬತ್ತು ಚಾರಣಿಗರ ಮೃತದೇಹಗಳನ್ನು ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 29 ರಂದು ಉತ್ತರಕಾಶಿಯಿಂದ 35 ಕಿಮೀ ದೂರದ ಚಾರಣಕ್ಕೆ 22 ಸದಸ್ಯರ ಟ್ರೆಕ್ಕಿಂಗ್ ತಂಡವನ್ನು ಮನೇರಿಯ ಹಿಮಾಲಯನ್ ವ್ಯೂ ಟ್ರೆಕ್ಕಿಂಗ್ ಏಜೆನ್ಸಿಯಿಂದ ಕಳುಹಿಸಲಾಗಿತ್ತು. ಈ ತಂಡದಲ್ಲಿ ಕರ್ನಾಟಕದ 18 ಚಾರಣಿಗರು ಮತ್ತು ಮಹಾರಾಷ್ಟ್ರದ ಓರ್ವರ ಜೊತೆಗೆ ಮೂವರು ಸ್ಥಳೀಯ ಮಾರ್ಗದರ್ಶಕರಿದ್ದರು.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಡೆಹ್ರಾಡೂನ್ ವಿಮಾನ ನಿಲ್ದಾಣದಿಂದ ಎಲ್ಲಾ ಒಂಬತ್ತು ಮೃತದೇಹಗಳನ್ನು ಎಂಬಾಮಿಂಗ್ ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಎಂಬಾಮ್ ಮಾಡಿದ ನಂತರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಆಂಬ್ಯುಲೆನ್ಸ್‌ಗಳಲ್ಲಿ ಸಾಗಿಸಲಾಗುವುದು. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಜಾಗವನ್ನು ಕಾಯ್ದಿರಿಸಲಾಗಿದೆ. ಮೃತರ ವಿವರಗಳನ್ನು ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ರಕ್ಷಿಸಲಾದ ಎಲ್ಲಾ 13 ಚಾರಣಿಗರು ಇಂದು ಸಂಜೆಯೊಳಗೆ ಬೆಂಗಳೂರು ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರೂ ಸೇರಿದಂತೆ ಎಂಟು ಚಾರಣಿಗರನ್ನು ಬುಧವಾರ ರಕ್ಷಿಸಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ರಕ್ಷಿಸಲ್ಪಟ್ಟ ಐವರು ಚಾರಣಿಗರನ್ನು ಇಂದು ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ಏರ್‌ಲಿಫ್ಟ್ ಮಾಡಲಾಗಿದೆ. ಬುಧವಾರ ಐವರು ಚಾರಣಿಗರ ಮೃತದೇಹಗಳನ್ನು ವಿಮಾನದಲ್ಲಿ ಉತ್ತರಕಾಶಿಗೆ ರವಾನಿಸಲಾಗಿದ್ದು, ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ ನಾಲ್ಕು ಮೃತದೇಹಗಳನ್ನು ಹೊರತೆಗೆದು ಉತ್ತರಕಾಶಿಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಮತ್ತು ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ಭೇಟಿ ಮಾಡಿದ ಸಚಿವರು, ವಿಪತ್ತಿನ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಗಾಗಿ ಅವರಿಗೆ ಧನ್ಯವಾದ ಹೇಳಿದರು.

ಘಟನೆ ಬೆಳಕಿಗೆ ಬಂದ ನಂತರ, ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ಕೃಷ್ಣ ಬೈರೇಗೌಡ ಅವರು ಬುಧವಾರ ಡೆಹ್ರಾಡೂನ್‌ಗೆ ತೆರಳಿದ್ದರು.

ಚಾರಣಿಗರ ಸುರಕ್ಷಿತ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮೃತರ ಮೃತದೇಹಗಳನ್ನು ಕೂಡಲೇ ರಾಜ್ಯಕ್ಕೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದರು.

ಕಂದಾಯ ಸಚಿವರ ಪ್ರಕಾರ, ಕರ್ನಾಟಕದ ಚಾರಣಿಗರ ತಂಡ ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಶಾಸ್ತ್ರತಾಲ್ ಮಯಲಿ ಎತ್ತರದ ಪ್ರದೇಶದಲ್ಲಿ ಚಾರಣ ಆರಂಭಿಸಿದೆ. ಗಮ್ಯಸ್ಥಾನ ತಲುಪಿದ ನಂತರ, ತಂಡವು ಮತ್ತೆ ಶಿಬಿರಕ್ಕೆ ಮರಳಲು ಪ್ರಯತ್ನಿಸಿದೆ. ಆದರೆ, ವಾಪಸ್ಸು ಬರುವಾಗ ಮಧ್ಯಾಹ್ನ 2 ಗಂಟೆ ವೇಳೆಗೆ ಬಿರುಗಾಳಿ ಬೀಸಿದ್ದರಿಂದ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT