ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜ್ಯ

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: BBMP ಚುನಾವಣೆ ಮೇಲೂ ಎಫೆಕ್ಟ್!

ಇದು ಸಾಮೂಹಿಕ ನಾಯಕತ್ವದ ವೈಫಲ್ಯ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರೋಧಿ ಮತಗಳ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ, ಪ್ರಚಾರದ ಹೊಣೆ ಹೊತ್ತಿದ್ದ ಕೆಲವು ಮಾಜಿ ಕಾರ್ಪೊರೇಟರ್‌ಗಳು ಮತ್ತು ಮುಖಂಡರನ್ನು ಕೆಳಗಿಳಿಸಬೇಕು ಹಾಗೂ ನಿಷ್ಠಾವಂತ ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ದಾರಿ ಮಾಡಿಕೊಡಬೇಕು ಎಂದು ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಒತ್ತಾಯಿಸಿದ್ದಾರೆ.

ಇದು ಸಾಮೂಹಿಕ ನಾಯಕತ್ವದ ವೈಫಲ್ಯ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರೋಧಿ ಮತಗಳ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಹೇಳಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಪಿಸಿ ಮೋಹನ್‌ ವಿರುದ್ಧ ಸ್ಪರ್ಧಿಸಿದ್ದ ಮನ್ಸೂರ್ ಅಲಿ ಖಾನ್ ಮಾತನಾಡಿ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಚುನಾವಣಾ ನಿರ್ವಹಣೆ ತನ್ನ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ. ಬೆಂಗಳೂರು ಉತ್ತರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜಿದ್ ಮತ್ತು ಬೆಂಗಳೂರು ಸೆಂಟ್ರಲ್ ಅಧ್ಯಕ್ಷ ಉದಯ್ ಕುಮಾರ್ ಅವರು ಕ್ಷೇತ್ರದಾದ್ಯಂತ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸಲು ವಿಫಲವಾದ ಕಾರಣ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯುವುದು ಕಷ್ಟವಾಗಬಹುದು ಎಂದು ಮೂಲಗಳು ತಿಳಿಸಿವೆ.

ಇಬ್ಬರೂ ನಾಯಕರು ಇತರ ಭಾಗಗಳಲ್ಲಿನ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಹೊಂದಿಲ್ಲ ಮತ್ತು ತಮ್ಮ ವಾರ್ಡ್‌ಗಳನ್ನು ಮೀರಿ ಬೆಳೆದಿಲ್ಲ. ಅವರಿಗೆ ಜವಾಬ್ದಾರಿ ನೀಡುವುದು ಪಕ್ಷಕ್ಕೆ ಸಮಸ್ಯೆಯಾಗಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.

ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ ಸಚಿವರು ಮತ್ತು ಮಾಜಿ ಕಾರ್ಪೊರೇಟರ್‌ಗಳು ಯಾವುದೇ ಪರಿಣಾಮ ಬೀರಲು ವಿಫಲರಾಗಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ. ತಮ್ಮ ಅಭ್ಯರ್ಥಿಗಳ ಸೋಲಿಗೆ ಅವರೇ ಹೊಣೆಗಾರರಾಗಿದ್ದು, ನೈತಿಕ ಹೊಣೆ ಹೊರಬೇಕು ಎಂದಿದ್ದಾರೆ.

ಉತ್ತರ ಭಾಗದ ಕೃಷ್ಣ ಬೈರೇಗೌಡ ಅವರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 41,000 ಮುನ್ನಡೆ ಸಾಧಿಸಿದೆ. ಅದೇ ರೀತಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಎಂಎಲ್‌ಸಿ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಬಿಜೆಪಿ ಬಂಡಾಯ ಶಾಸಕ ಎಸ್‌ಟಿ ಸೋಮಶೇಖರ್‌ ಬಿಜೆಪಿಗೆ ಮತ ಹೋಗುವುದನ್ನು ತಡೆಯಲು ವಿಫಲವಾಗಿರುವುದರಿಂದ ಕೇಸರಿ ಪಕ್ಷ 1.20 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಅಧ್ಯಕ್ಷ ಹರೀಶ್ ಹೇಳಿದ್ದಾರೆ. ಬೆಂಗಳೂರು ಸೆಂಟ್ರಲ್‌ನ ಲೋಕಸಭೆ ವ್ಯಾಪ್ತಿಗೆ ಬರುವ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 23,000 ಮತಗಳ ಗಳಿಸಿದೆ, ಹೀಗಾಗೀ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಹೊಣೆಯನ್ನು ದಿನೇಶ್ ಹೊರಬೇಕು. ಸಚಿವರು, ಮಾಜಿ ಕಾರ್ಪೊರೇಟರ್‌ಗಳು ಮತ್ತು ಸಂಸದೀಯ ವಿಭಾಗದ ಅಧ್ಯಕ್ಷರು ಕೆಳಗಿಳಿಯಬೇಕು ಎಂದು ಹರೀಶ್ ಒತ್ತಾಯಿಸಿದ್ದಾರೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಗದೂರು ವಾರ್ಡ್‌ನ ಮಾಜಿ ಕಾರ್ಪೊರೇಟರ್ ಉದಯ್ ಕುಮಾರ್, ಮಹದೇವಪುರದಲ್ಲಿ ಸೋತ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಅಸಹಕಾರ ನೀಡಿದ್ದಾರೆ ಎಂದು ಆರೋಪಿಸಿದರು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಇರುವ ಹಲವು ಅಧಿಕಾರಿಗಳು ಬಿಜೆಪಿ ಪರ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಮುನ್ನಡೆ ಸಾಧಿಸಲು ಸಹಾಯ ಮಾಡದವರನ್ನು ಪರಿಗಣಿಸಲಾಗುವುದಿಲ್ಲ ಎಂದು ಪಕ್ಷವು ಈಗಾಗಲೇ ಹೇಳಿರುವುದರಿಂದ ಕೆಲಸ ಮಾಡದ ನಾಯಕರನ್ನು ಬಿಬಿಎಂಪಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT