ಉತ್ತರಕಾಶಿಯಲ್ಲಿ ರಕ್ಷಿಸಲ್ಪಟ್ಟ ಚಾರಣಿಗನಿಗೆ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವುದು. 
ರಾಜ್ಯ

ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ 9 ಚಾರಣಿಗರು ಸಾವು: ನಿಜಕ್ಕೂ ಆಗಿದ್ದೇನು...?

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ.

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ.

ಡೆಹ್ರಾಡೂನ್‌ನ ಬಿಜಾಪುರ ಅತಿಥಿ ಗೃಹದಲ್ಲಿ ರಕ್ಷಿಸಲ್ಪಟ್ಟ 8 ಚಾರಣಿಗರನ್ನು ಭೇಟಿಯಾಗಲು ಸಚಿವರು ಉತ್ತರಾಖಂಡಕ್ಕೆ ಭೇಟಿ ನೀಡಿದ್ದು, ಘಟನೆ ವೇಳೆ ನಿಜಕ್ಕೂ ಆಗಿದ್ದೇನು ಎಂಬುದನ್ನು ಸಚಿವರು ವಿವರಿಸಿದ್ದಾರೆ.

ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತ ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.

ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಿಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.

ಜೂನ್ 4 ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.

ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಸಚಿವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT