ಸಿಎಂ ಸಿದ್ದರಾಮಯ್ಯ 
ರಾಜ್ಯ

ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ ಎಂದರು.

ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಡವಾಗಿ ಇಟ್ಟಿತ್ತು. ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ ಎಂದರು. ಇಂಥಾ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ ಎಂದು ಕರೆ ನೀಡಿದರು.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT