ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ

ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ ಮೂಲದವರೆಂದು ತಿಳಿದುಬಂದಿದೆ. ಜೂನ್‌ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್‌ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್‌ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT