ಅಪಘಾತಕ್ಕೀಡಾದ ಕಾರು 
ರಾಜ್ಯ

ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು; ಮರದಲ್ಲಿ ನೇತಾಡಿದ ಶವ!

ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.

ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ. ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.

ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ': SCO ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಅಂತಾರಾಷ್ಟ್ರೀಯ ವೇದಿಕೆಯಲ್ಲೇ ಪಾಕಿಸ್ತಾನ ಪ್ರಧಾನಿ Shehbaz Sharif ಮುಜುಗರ, ಸೊಪ್ಪು ಹಾಕದ Putin, xi jinping! Video

ಪೂರ್ವ ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನ: 610 ಜನರು ಸಾವು, 1,300 ಮಂದಿಗೆ ಗಾಯ

ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCO ಶೃಂಗಸಭೆ 2025: ಅಮೆರಿಕಾ 'ಬೆದರಿಕೆ ವರ್ತನೆ'ಗೆ ಚೀನಾ ಖಂಡನೆ, ಡೊನಾಲ್ಡ್ ಟ್ರಂಪ್ ವಿರುದ್ಧ ಕ್ಸಿ ಜಿನ್‌ಪಿಂಗ್ ಪರೋಕ್ಷ ವಾಗ್ದಾಳಿ

SCROLL FOR NEXT