ಸಿಎಂ ಸಿದ್ದರಾಮಯ್ಯ 
ರಾಜ್ಯ

NEET ಪರೀಕ್ಷೆಯಲ್ಲಿ 'ಅಕ್ರಮ': ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಎನ್‌ಇಟಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಟಿ)ಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ನೀಟ್ ಫಲಿತಾಂಶಕ್ಕೆ ಸಂಬಂಧಿಸಿದಂತೆ ಇಡೀ ದೇಶವೇ ಭಾರೀ ಅಕ್ರಮ ನಡೆದಿರುವ ಶಂಕೆ ವ್ಯಕ್ತಪಡಿಸಿದೆ. ಪರೀಕ್ಷೆ ಬರೆದ 24 ಲಕ್ಷ ಯುವಕರು ಮತ್ತು ಅವರ ಪೋಷಕರಿಗೆ ಉತ್ತರಿಸುವ ಬಗ್ಗೆ ತಲೆಕೆಡಿಸಿಕೊಳ್ಳದ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅವರ ಭವಿಷ್ಯವನ್ನು ನಾಶಮಾಡಲು ಸಿದ್ಧವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

"67 ಅಭ್ಯರ್ಥಿಗಳು ನೀಟ್ ಪರೀಕ್ಷೆಯಲ್ಲಿ 720 ಕ್ಕೆ 720 ಅಂಕಗಳನ್ನು ಗಳಿಸಿದ್ದಾರೆ. ಹಿಂದಿನ ವರ್ಷಗಳ ಟಾಪರ್‌ಗಳ ಸಂಖ್ಯೆಗೆ ಹೋಲಿಸಿದರೆ, ಈ ವರ್ಷದ ಫಲಿತಾಂಶವು ಅನುಮಾನ ಹುಟ್ಟುಹಾಕುತ್ತಿದೆ. 2019 ಮತ್ತು 2020 ರಲ್ಲಿ, ಒಬ್ಬ ಅಭ್ಯರ್ಥಿ ಮಾತ್ರ ಪೂರ್ಣ ಅಂಕ ಗಳಿಸಿದ್ದರು; 2021 ರಲ್ಲಿ, ಮೂವರು; 2022 ರಲ್ಲಿ ಒಬ್ಬರು ಮತ್ತು 2023ರಲ್ಲಿ ಇಬ್ಬರು." ಈ ವರ್ಷ 67 ಟಾಪರ್‌ಗಳು ಹೊರಹೊಮ್ಮಿದ್ದಾರೆ. ಇಷ್ಟೊಂದು ಸಂಖ್ಯೆಯ ವಿದ್ಯಾರ್ಥಿಗಳು ಶೇಕಡಾ 100 ಅಂಕ ಗಳಿಸುವುದು ಅನುಮಾನ ಹುಟ್ಟುಹಾಕಿದೆ.

ಈ ಬೆಳವಣಿಗೆ ಕಾಕತಾಳೀಯವೇ ಅಥವಾ ಅನಾಹುತವೇ ಎಂಬುದನ್ನು ನರೇಂದ್ರ ಮೋದಿ ಸರ್ಕಾರ ಸ್ಪಷ್ಟಪಡಿಸಬೇಕು' ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

67 ಟಾಪರ್‌ಗಳ ಪೈಕಿ 44 ಅಭ್ಯರ್ಥಿಗಳು ಗ್ರೇಸ್ ಮಾರ್ಕ್ಸ್‌ನಿಂದ ಉನ್ನತ ಅಂಕಗಳನ್ನು ಗಳಿಸಿದ್ದಾರೆ. ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಟಾಪರ್‌ಗಳಾದಾಗ, ಅಂಕಗಳ ಪ್ರಕ್ರಿಯೆ ಮತ್ತು ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಉದ್ಭವಿಸುತ್ತದೆ.

62 ರಿಂದ 69 ರವರೆಗಿನ ನೋಂದಣಿ ಸಂಖ್ಯೆ ಹೊಂದಿರುವ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಅದೇ ಪರೀಕ್ಷಾ ಕೇಂದ್ರದವರು ಎಂಬುದು ಆಶ್ಚರ್ಯಕರ ಸಂಗತಿಯಾಗಿದೆ. ಅವರಲ್ಲಿ ಆರು ಮಂದಿ 720ಕ್ಕೆ 720 ಅಂಕಗಳನ್ನು ಪಡೆದರೆ, ಉಳಿದ ಇಬ್ಬರು ಅಭ್ಯರ್ಥಿಗಳು 718 ಮತ್ತು 719 ಅಂಕಗಳನ್ನು ಪಡೆದಿದ್ದಾರೆ. ಅಕ್ರಮಗಳು ಎದ್ದು ಕಾಣುತ್ತಿದ್ದು, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ, ನೊಂದ ಪರೀಕ್ಷಾರ್ಥಿಗಳಿಗೆ ನ್ಯಾಯ ದೊರಕಿಸಿಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT