ಬಂಧನ (ಸಂಗ್ರಹ ಚಿತ್ರ) ಸಂಗ್ರಹ ಚಿತ್ರ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರ ಇಬ್ಬರು ಆಪ್ತರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರ ಇಬ್ಬರು ಆಪ್ತರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ನೆಕ್ಕಂಟಿ ನಾಗರಾಜ್ ಹಾಗೂ ಅವರ ಬಾಮೈದ ನಾಗೇಶ್ವರರಾವ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಮರ್ಲಾನಹಳ್ಳಿಯ ನೆಕ್ಕಂಟಿ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ಆಪ್ತ. ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಜೆ.ಜಿ. ಪದ್ಮನಾಭ್ (55), ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್ ಜಿ. ದುರ್ಗಣ್ಣನವರ ಹಾಗೂ ಇತರರ ಜೊತೆ ಸೇರಿ ಕೃತ್ಯ ಎಸಗಿರುವುದು ಪುರಾವೆಗಳಿಂದ ಗೊತ್ತಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ನಾಗರಾಜ್ ಅವರ ಬಾಮೈದನಾದ ನಾಗೇಶ್ವರರಾವ್, ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಯ (ಎಫ್‌ಎಫ್‌ಸಿಸಿಎಸ್‌ಎಲ್‌) ಅಧ್ಯಕ್ಷ ಸತ್ಯನಾರಾಯಣ್ ಹಾಗೂ ಇತರರ ಜೊತೆ ಒಡನಾಟ ಹೊಂದಿದ್ದ. ಹಣ ಅಕ್ರಮ ವರ್ಗಾವಣೆ ಸಂಚಿನಲ್ಲಿ ಈತ ಪ್ರಮುಖ ಆರೋಪಿ. ಈತನೇ ಹೈದರಾಬಾದ್‌ನ ಹಲವರು ಕಂಪನಿಗಳ ಮುಖ್ಯಸ್ಥರನ್ನು ಪದ್ಮನಾಭ್ ಅವರಿಗೆ ಭೇಟಿ ಮಾಡಿಸಿದ್ದ. ನಂತರವೇ ಮಾತುಕತೆ ನಡೆದು, ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ.

ಪದ್ಮನಾಭ್, ಪರಶುರಾಮ್ ಹಾಗೂ ಸತ್ಯನಾರಾಯಣ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಇದೀಗ ನಾಗರಾಜ್ ಹಾಗೂ ನಾಗೇಶ್ವರರಾವ್ ಅವರನ್ನು ಸೆರೆ ಹಿಡಿಯಲಾಗಿದೆ. ಇವರಿಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಲಾಗುವುದು ಎಂದು ಎಸ್‌ಐಟಿ ಮೂಲಗಳು ಮಾಹಿತಿ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

SCROLL FOR NEXT