ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ವಂಚಿಸಲು ವ್ಯಕ್ತಿಯೊಬ್ಬ ಯತ್ನಿಸಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರು ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಮೇ 20 ರಿಂದ ಜೂನ್ 5 ರ ನಡುವೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಕರೆ ಮಾಡಿ ವ್ಯಕ್ತಿ, ತನ್ನನ್ನು ಡಿಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ್ದಾನೆಂದು ದೂರಿನಲ್ಲಿ ಹೇಳಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡುತ್ತಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ವ್ಯಕ್ತಿಗೆ ಯಾರಾದರೂ ಹಣವನ್ನು ಕಳುಹಿಸಿದ್ದಾರೆಯೇ ಎಂಬುದು ಇನ್ನಬೂ ಖಚಿತವಾಗಿಲ್ಲ. ಈ ಸಂಬಂಧ ಯಾವುದೇ ದೂರುಗಳೂ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.