ಸಂಗ್ರಹ ಚಿತ್ರ 
ರಾಜ್ಯ

ನಕಲಿ ವೈದ್ಯಕೀಯ ಹಾವಳಿ ವಿರುದ್ಧ ಕಠಿಣ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಇನ್ಮುಂದೆ ಕಡ್ಡಾಯ!

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕೆಪಿಎಂಇ ಕಾಯ್ದೆ ನಿಯಮ 5ರ ಪ್ರಕಾರ, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಿದೆ.

ಕೆಲ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಪದ್ಧತಿ, ಮನೆ ಮದ್ದುಗಳು, ಬಾಡಿ ಮಸಾಜ್ ಹಾಗೂ ವಿವಿಧ ಥೆರಪಿಗಳ ‌ ಅನಧಿಕೃತ ಅಭ್ಯಾಸದಲ್ಲಿ ತೊಡಗಿಕೊಂಡಿರುವುದು ಗಮನಕ್ಕೆ ಬಂದಿದೆ. ಇವುಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆಗಳಾಗಿ ವರ್ಗೀಕರಿಸಲ್ಪಟ್ಟಿಲ್ಲ. ಆದ್ದರಿಂದ ಎಲ್ಲ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ಹೊರಭಾಗದಲ್ಲಿ ಮಾಹಿತಿ ಫಲಕವನ್ನು ಹಾಕಬೇಕು. ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ ಸೂಚಿತ ಫಲಕವನ್ನು ಬಳಸಬೇಕು. ಈ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಲಾಗಿದೆ.

ಈ ನಿಯಮಗಳನ್ನು ಅನುಸರಿಸಲು ವಿಫಲವಾದಲ್ಲಿ, ಅಂತಹವರ ವಿರುದ್ಧ ಕೆಪಿಎಂಇ ಕಾಯ್ದೆಯಡಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ. ನಕಲಿ ವೈದ್ಯರಿಗೆ ಕಡಿವಾಣ ಹಾಕಲು ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆ ಪರಾಮರ್ಶಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT