ಚಿಕೋಡಿ ಕಾರು ಅಪಘಾತ 
ರಾಜ್ಯ

ಚಿಕ್ಕೋಡಿಯಲ್ಲಿ ಭೀಕರ ಕಾರು ಅಪಘಾತ; ಇಬ್ಬರ ಸಾವು, ಕಾರು ಬಿಟ್ಟು ಚಾಲಕ ಪರಾರಿ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಈ ಭೀಕರ ಕಾರು ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಎಂದು ಗುರುತಿಸಲಾಗಿದೆ.

ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ.

ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT