ನವದೆಹಲಿ: BJP ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಕದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಭಾರಿ ಹಿನ್ನಡೆಯಾಗಿದ್ದು, ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಹೌದು.. ಬಿಜೆಪಿ ಕಾರ್ಯಕರ್ತ ಯೋಗಿಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಆರೋಪ ನಿಗದಿಪಡಿಸುವ ಕರ್ನಾಟಕದ ವಿಚಾರಣಾ ನ್ಯಾಯಾಲಯವೊಂದರ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.
ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಮೂರ್ತಿಗಳಾದ ಪಿ ವಿ ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿತು.
ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಮೂರ್ತಿಗಳಾದ ಪಿ.ವಿ. ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು.
ತಮ್ಮ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಏ.8ರಂದು ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಚಾರ್ಜ್‌ಶೀಟ್ ಕೈಬಿಡಲು ನಿರಾಕರಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ.