ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.
ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.