ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.
ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.