ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ (ಸಂಗ್ರಹ ಚಿತ್ರ) 
ರಾಜ್ಯ

ಸಬ್ ಕಾ ಸಾಥ್, ಸಬ್ ಕಾ ವಿಕಾಸಕ್ಕೆ ನಮ್ಮ ಬೆಂಬಲವಿದೆ: JDS ವರಿಷ್ಠ HD ದೇವೇಗೌಡ

ನವದೆಹಲಿಯಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಬೆಂಗಳೂರು: ನವದೆಹಲಿಯಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ದೇವೇಗೌಡ, ಈ ಲೋಕಸಭಾ ಚುನಾವಣೆಯು ಕುತೂಹಲಕಾರಿ ಫಲಿತಾಂಶ ನೀಡಿದ್ದು, ದೇಶದ ಪ್ರಜಾಪ್ರಭುತ್ವದ ಕಂಪನ್ನು ಸಾಬೀತುಪಡಿಸಿದೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಅಪಖ್ಯಾತಿಗೊಳಿಸಲು ಕಾಂಗ್ರೆಸ್‍ನ ಕೊಳಕು ಪ್ರಚಾರವನ್ನು ಈ ಫಲಿತಾಂಶ ಬಹಿರಂಗಪಡಿಸುತ್ತದೆ. ದೇಶದ ಜನರು ಅವರ ದುರಹಂಕಾರಕ್ಕೆ ಪಾಠ ಕಲಿಸಿದ್ದಾರೆಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಾರಿಯ ಚುನಾವಣೆಯನ್ನು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಭಾವಿಸುತ್ತಿದೆ. ಆದರೆ ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಂತಹ ಅವರೇ ನಡೆಸುತ್ತಿರುವ ರಾಜ್ಯಗಳಲ್ಲಿ ಅವರು ಸೋತಿದ್ದಾರೆ. ಅವರು ಇತರ ಕೆಲವು ರಾಜ್ಯಗಳಲ್ಲಿ ತುಲನಾತ್ಮಕವಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಅವರ ಮಿತ್ರರು ಎಷ್ಟು ದಿನ ಸಹಿಸಿಕೊಳ್ಳುತ್ತಾರೆಂದು ನೋಡೋಣ ಎಂದು ‘ಇಂಡಿಯಾ ಕೂಟ’ದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಜೆಡಿಎಸ್‍ಗೆ ಕೇಂದ್ರ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ದೇವೇಗೌಡ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಂತೆ ನಿಮ್ಮ ಕಾರ್ಯಸೂಚಿಯನ್ನು ಜನತೆಗೆ ತಲುಪಿಸಲು ಸಹಾಯ ಮಾಡುತ್ತೇವೆ. ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದ ಭಾಗವಾಗಲು ನಾನು ಇಷ್ಟಪಡುತ್ತಿದ್ದೇನೆ. ಆದರೆ, ನನ್ನ ಆರೋಗ್ಯವು ದಹಲಿ ಪ್ರಯಾಣಿಸಲು ನನಗೆ ಅವಕಾಶ ನೀಡುತ್ತಿಲ್ಲ. ಆದರೂ, ನಿಮ್ಮ ಆತ್ಮೀಯ ಆಹ್ವಾನಕ್ಕಾಗಿ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರಕಾರಕ್ಕೆ ನನ್ನ ಪಕ್ಷವಾದ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT