ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು

ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ಚಿಕ್ಕಮಗಳೂರು: ಜಿಲ್ಲೆಯ ಕೆಮ್ಮಣ್ಣುಗುಂಡಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ 25 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ಬಸ್ಸಿನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಇಬ್ಬರು ಬಾಡಿಗೆಗೆ ಬೈಕ್ ತೆಗೆದುಕೊಂಡು ವಿವಿಧ ಸ್ಥಳಗಳಿಗೆ ತೆರಳಿದ್ದರು. ಕೆಲವೆಡೆ ಭೇಟಿ ನೀಡಿದ ಬಳಿಕ ಸೋಮವಾರ ಹೆಬ್ಬೆ ಜಲಪಾತ ತಲುಪಿದ್ದರು.

'ಮುಂಗಾರು ಮಳೆಯಿಂದಾಗಿ, ಜಲಪಾತವು ತುಂಬಿ ಹರಿಯುತ್ತಿದೆ. ಜಲಪಾತ ತುಂಬಾ ಆಳವಾಗಿರಲಿಲ್ಲವಾದರೂ, ಬಂಡೆಗಳು ತುಂಬಾ ಜಾರುತ್ತಿದ್ದವು. ಅವರಿಗೆ ಈಜು ಬರುತ್ತಿರಲಿಲ್ಲವಾದರೂ, ನೀರಿಗೆ ಇಳಿಯಲು ನಿರ್ಧರಿಸಿದ್ದರು' ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಶ್ರವಣ್ ಕಾಲು ಜಾರಿ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾನೆ. ಈ ವೇಳೆ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಶ್ರವಣ್ ಅವರನ್ನು ರಕ್ಷಿಸಿದ್ದಾರೆ.

'ಆತನನ್ನು ಹೊರಗೆ ತರುವಾಗ ಇನ್ನೂ ಜೀವಂತವಾಗಿದ್ದನು. ಹೆಬ್ಬೆ ಜಲಪಾತದ ಬಳಿ ಸಂದರ್ಶಕರಲ್ಲಿ ಒಬ್ಬ ವೈದ್ಯರಿದ್ದರು, ಅವರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದಾರೆ. ನಂತರ ಆತನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ' ಎಂದು ಅಧಿಕಾರಿ ಹೇಳಿದರು.

ಶ್ರವಣ್ ಇ-ಕಾಮರ್ಸ್ ಸಂಸ್ಥೆಯೊಂದರಲ್ಲಿ ಸಿಸ್ಟಮ್ ವಿಶ್ಲೇಷಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT