ಕೃಷಿ ಚಟುವಟಿಕೆ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್‌ ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳU ಮೊದಲ ವಾರದಲ್ಲೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆಂದು ತಿಳಿಸಿದರು.

ಕೃಷಿ ವಿಮೆ ಮೂಲಕವೂ ರೈತರಿಗೆ ಈ ಬಾರಿ ಅತಿ ಹೆಚ್ಚು ಅಂದರೆ 1,654 ಕೋಟಿ ರೂ. ಪರಿಹಾರ ಸಿಕ್ಕಿದೆ. ಇನ್ನೂ 136 ಕೋಟಿ ರೂ. ಬಾಕಿ ಇದೆ ಎಂದರು.

ಸಂಪುಟ ಉಪಸಮಿತಿ ಸಭೆಯಲ್ಲಿ ಮುಂಗಾರು ಸ್ಥಿತಿಯ ಬಗ್ಗೆಯೂ ಅವಲೋಕಿಸಲಾಗಿದೆ. ಪೂರ್ವ ಮುಂಗಾರಿನಲ್ಲಿ ಸುಮಾರು 115 ಮಿ.ಮೀ. ಮಳೆಯಾಗುತ್ತಿತ್ತು. ಆದರೆ, ಈ ಬಾರಿ 150 ಮಿ.ಮೀ. ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಶೇ.71ರಷ್ಟು ಮಳೆ ಕೊರತೆಯಾಗಿತ್ತು. ಈ ಬಾರಿ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲಭಾಗದಲ್ಲೂಮಳೆ ಬಂದಿದೆ. ಐದು ಜಿಲ್ಲೆಗಳಲ್ಲಿವಾಡಿಕೆಯ ಮಳೆಯಾಗಿದ್ದರೆ, ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮತ್ತು ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ವರದಿ ನೀಡಿದ್ದಾರೆ. ಮಳೆ ಸಮಯದಲ್ಲಿಎಲ್ಲಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಇದೇ ಶನಿವಾರದಿಂದ ವಿಭಾಗವಾರು ಸಭೆ ನಡೆಸುತ್ತೇನೆ ಎಂದೂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT