ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಿರ್ದೇಶಕ ಶಿವಶಂಕರ್ ಅವರನ್ನು ಸನ್ಮಾನಿಸಿದರು. 
ರಾಜ್ಯ

65 ಅಗ್ನಿಶಾಮಕ ಸಿಬ್ಬಂದಿಗೆ 'ಮುಖ್ಯಮಂತ್ರಿ ಚಿನ್ನದ ಪದಕ' ಗೌರವ: ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಿದ ಗೃಹ ಸಚಿವ ಪರಮೇಶ್ವರ್

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ 65 ಮಂದಿ ಸಿಬ್ಬಂದಿ ಭಾಜನರಾಗಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ 65 ಮಂದಿ ಸಿಬ್ಬಂದಿ ಭಾಜನರಾಗಿದ್ದಾರೆ.

13 ಹೋಮ್ ಗಾರ್ಡ್‌ಗಳು ಮತ್ತು ಇಬ್ಬರು ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸೇರಿದಂತೆ 65 ಅಗ್ನಿಶಾಮಕ ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಅವರ ಅಪ್ರತಿಮ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಅಗ್ನಿಶಾಮಕ ಸಿಬ್ಬಂದಿಗೆ ಸಿಎಂ ಪದಕವನ್ನು ನೀಡಿ ಗೌರವಿಸಿದ ಬಳಿಕ, ಕೊಳವೆಬಾವಿಗೆ ಹಿದ್ದ ಮಗುವನ್ನು ರಕ್ಷಿಸುವ ಮೂಲಕ ಶೌರ್ಯ ಪ್ರದರ್ಶಿಸಿದ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಇಬ್ಬರು ಸೇರಿದಂತೆ 11 ಅಗ್ನಿಶಾಮಕ ಸಿಬ್ಬಂದಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸನ್ಮಾನಿಸಿದರು.

ವಿಜಯಪುರದಲ್ಲಿ ಏಪ್ರಿಲ್ 3 ರಂದು 205 ಅಡಿ ಕೊಳವೆಬಾವಿಗೆ ಬಿದ್ದ ಎರಡೂವರೆ ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಅವರು HPCL ಪೆಟ್ರೋಲಿಯಂ ಸಹಯೋಗದೊಂದಿಗೆ 'ಪೆಟ್ರೋ ಕಾರ್ಡ್' ಅನ್ನು ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT