ನಟ ಜಗ್ಗೇಶ್ 
ರಾಜ್ಯ

ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ಮದಕ್ಕೆ ಕಾರುಣ್ಯದ ಅರಿವಿಲ್ಲಾ; ಜಗ್ಗೇಶ್ ಮಾರ್ಮಿಕ ಟ್ವೀಟ್

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಕೇಸ್ ನಲ್ಲಿದರ್ಶನ್ ಎ2 ಆರೋಪಿಯಾಗಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ.

ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಅವರು ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ