ಬೆಂಗಳೂರು ಪೊಲೀಸರು 
ರಾಜ್ಯ

ರೇಣುಕಾಸ್ವಾಮಿ ಕೊಲೆ: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಕರೆದೊಯ್ದು ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟನಗೆರೆಯ ಶೆಡ್ ಗೆ ಕರೆದೊಯ್ದಿರುವ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟನಗೆರೆಯ ಶೆಡ್ ಗೆ ಕರೆದೊಯ್ದಿರುವ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದಿದ್ದ ರೇಣುಕಾಸ್ವಾಮಿಯನ್ನು ಇದೇ ಶೆಡ್ ಗೆ ಕರೆದೊಯ್ದು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದರು. ಹೀಗಾಗಿ ಅಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಫ್ಎಸ್ಎಲ್ ತಂಡ ಹಾಗೂ ಪೊಲೀಸರು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ, ನಿಖಿಲ್, ವಿನಯ್, ಕಾರ್ತಿಕ್ ಮತ್ತು ರಾಘವೇಂದ್ರ ಸೇರಿದಂತೆ 13 ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದ್ದು ನಿನ್ನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣಗೆರೆಯ ಶೆಡ್ ನಲ್ಲಿ ಹತ್ಯೆ ಮಾಡಿದ ಬಳಿಕ ಆರೋಪಿಗಳ ಪೈಕಿ ನಾಲ್ವರು ಶವವನ್ನು ಸುಮನಹಳ್ಳಿಯ ಬಳಿ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣಗೆರೆ ಶೆಡ್ ಸ್ಥಳ ಮಹಜರಿಗೂ ಮುನ್ನ ಆರೋಪಿಗಳನ್ನು ಶವ ಎಸೆದ ಜಾಗದಲ್ಲಿ ಸ್ಥಳ ಮಹಜರು ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣಗೆರೆಯ ಶೆಡ್ ನಲ್ಲಿ ಹತ್ಯೆ ಮಾಡಿದ ಬಲಿಕ ಆರೋಪಿಗಳ ಪೈಕಿ ನಾಲ್ವರು ಶವವನ್ನು ಸುಮನಹಳ್ಳಿಯ ಬಳಿ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣಗೆರೆ ಶೆಡ್ ಸ್ಥಳ ಮಹಜರಿಗೂ ಮುನ್ನ ಆರೋಪಿಗಳನ್ನು ಶವ ಎಸೆದ ಜಾಗದಲ್ಲಿ ಸ್ಥಳ ಮಹಜರು ನಡೆಸಿದ್ದರು.

ಚಿತ್ರದುರ್ಗದ ಜಿಲ್ಲಾ ಕೇಂದ್ರ ಪಟ್ಟಣದ ನಿವಾಸಿ ರೇಣುಕಾಸ್ವಾಮಿ ಅವರು ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮೀ ದಾಂಪತ್ಯದಲ್ಲಿ ಬಿರುಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಅವರು 'ಅಸಭ್ಯ ಭಾಷೆ' ಬಳಸಿದ್ದಾರೆ ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT