ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೈರತಿ ಸುರೇಶ್ 
ರಾಜ್ಯ

ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್ ಸೂಚನೆ

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದುಕೊಂಡಂತೆ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದುಕೊಂಡಂತೆ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು ಮುಕ್ತಾಯವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು, ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ Short time Re-tender ಕರೆಯುವಂತೆ ಸೂಚಿಸಿದರು.

ಬಿಬಿಎಂಪಿಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ Corporation ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೇ ಎನ್ನುವುದನ್ನು ಪರಿಶೀಲಿಸಿ. ಅಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ Corporation ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಬೇಕು, ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಲು ಸಚಿವರು ಕಾರ್ಯದರ್ಶಿಗಳಿಗೆ ಸೂಚಿಸಿದರು.

ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಅವರು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ