ಸಿಎಂ ಸಿದ್ದರಾಮಯ್ಯ ಅವರು ಆನ್ ಲೈನ್‌ನಲ್ಲಿಯೇ ಸನ್ನದು ವಿತರಣೆ ಹಾಗೂ ನವೀಕರಣ ಮತ್ತು ಇತರ ಸೇವೆಗಳನ್ನು ಒದಗಿಸುವ ಅಬಕಾರಿ ಇಲಾಖೆಯ ಆನ್ ಲೈನ್ ಸೇವೆಗಳ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. 
ರಾಜ್ಯ

ಬೇರೆ ರಾಜ್ಯಗಳಿಂದ ಅಕ್ರಮ ಮದ್ಯ ಸಾಗಣೆ ನಿಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆಯಾಗುವುದನ್ನ ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆಯಾಗುವುದನ್ನ ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಸಾಮಥ್ರ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಕಾನ್ಸ್ ಟೇಬಲ್, ಸಬ್ ಇನ್ಸ್‍ಪೆಕ್ಟರ್ ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು. ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದರು.

ಆನ್‍ಲೈನ್‍ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT