ಹೈಕೋರ್ಟ್  
ರಾಜ್ಯ

ಅಪ್ರಾಪ್ತರಿಂದ ಆಗುವ ಅಪಘಾತಗಳಿಗೆ ವಾಹನ ಮಾಲೀಕರೆ ಪರಿಹಾರ ನೀಡಬೇಕು, ವಿಮಾ ಕಂಪನಿಯಲ್ಲ: High court

ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರು ಪರಿಹಾರ ನೀಡಬೇಕು ಹೊರತು ವಿಮಾ ಕಂಪನಿ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರು: ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರು ಪರಿಹಾರ ನೀಡಬೇಕು ಹೊರತು ವಿಮಾ ಕಂಪನಿ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಿಮಾ ಕಂಪನಿಯ ಮೇಲಿನ ಹೊಣೆಗಾರಿಕೆಯನ್ನು ನಿಗದಿಪಡಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ತೀರ್ಪು ರದ್ದುಗೊಳಿಸಿದ, ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಅರ್ಜಿಯನ್ನು ಪುರಸ್ಕರಿಸಿದ್ದಾರೆ. ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸುವ ಹೊಣೆಗಾರಿಕೆಯಿಂದ ವಿಮಾ ಕಂಪನಿಯನ್ನು ನ್ಯಾಯಾಲಯ ಮುಕ್ತಗೊಳಿಸಿತು. ಇದು ವಾರ್ಷಿಕ 6% ಬಡ್ಡಿಯೊಂದಿಗೆ ಟ್ರಿಬ್ಯೂನಲ್ ನೀಡಿದ ಪರಿಹಾರವನ್ನು 2.56 ಲಕ್ಷದಿಂದ 4.44 ಲಕ್ಷಕ್ಕೆ ಹೆಚ್ಚಿಸಿದೆ.

ಅಪಘಾತಕ್ಕೀಡಾದ ವಾಹನದ ಮಾಲೀಕರಾದ ಮಹಮ್ಮದ್ ಮುಸ್ತಫಾ ಅವರು ಪರಿಹಾರವನ್ನು ಹಕ್ಕುದಾರರಿಗೆ ನೀಡಬೇಕು. ಅಪಘಾತದ ಸಮಯದಲ್ಲಿ ಸಾವನ್ನಪ್ಪಿದವರಿಗೆ 61 ವರ್ಷ ವಯಸ್ಸು, ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿರುವ ಕಾರಣ ಪರಿಹಾರವನ್ನು ಹೆಚ್ಚಿಸಲಾಗಿದೆ.

2014ರ ಆಗಸ್ಟ್ 11ರಂದು ತೀರ್ಪು ನೀಡಿದ ನ್ಯಾಯಪೀಠ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನೆಲೆಸಿರುವ ಮೃತರ ಕುಟುಂಬದ ಸದಸ್ಯರಾದ ಬೀಬಿ ನೈಸಾ ಮತ್ತು ಹಕ್ಕುದಾರರಿಗೆ ವಾರ್ಷಿಕ ಶೇ.8ರ ಬಡ್ಡಿಯೊಂದಿಗೆ 2.56 ಲಕ್ಷ ರೂ.ಗಳ ಪರಿಹಾರ ನೀಡುವಂತೆ ಆದೇಶ ನೀಡಿತು.

ಡಿಸೆಂಬರ್ 12, 2008 ರಂದು ಬೆಳಿಗ್ಗೆ 8.45 ರ ಸುಮಾರಿಗೆ, ಭಟ್ಕಳದ ರಂಗಿನಕಟ್ಟಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಅಪ್ರಾಪ್ತ ಚಲಾಯಿಸುತ್ತಿದ್ದ ಮೋಟಾರ್ ಸೈಕಲ್ ಹಸನ್ ಶಬ್ಬೀರ್ ಗ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡ ಶಬ್ಬೀರ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮೃತರ ಕುಟುಂಬಕ್ಕೆ 2.56 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಪೀಠ ತೀರ್ಪು ನೀಡಿತ್ತು. ಅಪಘಾತವು ಆಗ 16 ವರ್ಷ ವಯಸ್ಸಿನ ಹುಡುಗನಿಂದ ಸಂಭವಿಸಿದೆ ಎಂಬ ಆಧಾರದ ಮೇಲೆ ವಿಮಾ ಕಂಪನಿಯು ಇದನ್ನು ಪ್ರಶ್ನಿಸಿದೆ. ಸವಾರನು ಅಪ್ರಾಪ್ತನಾಗಿದ್ದರಿಂದ, ಅವನು ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿಲ್ಲ. ಆದ್ದರಿಂದ ಪರಿಹಾರವನ್ನು ಪಾವತಿಸಲು ತಾನು ಜವಾಬ್ದಾರನಾಗಿರುವುದಿಲ್ಲ ಎಂದು ವಿಮಾ ಕಂಪನಿ ವಾದಿಸಿತು. ವಿಮಾ ಕಂಪನಿಯು ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್ ಗಮನಿಸಿ ಅಬ್ದುಲ್ ಹಕೀಂ ಗವಾಯಿ ಅವರ ಮಗ ಅಪ್ರಾಪ್ತ ಬಾಲಕ ಮೋಟಾರ್‌ಸೈಕಲ್ ಓಡಿಸುತ್ತಿದ್ದನೆಂದು ಬಹಿರಂಗಪಡಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT