ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ದರ್ಶನ್ ಕನ್ನಡ ಚಿತ್ರರಂಗದ ದೊಡ್ಡ ನಟ, ಸದ್ಯಕ್ಕೆ ಬ್ಯಾನ್ ಇಲ್ಲ: ಆದರೆ ಕೊಲೆಯನ್ನು ತೀವ್ರವಾಗಿ ಖಂಡಿಸಿದ ಫಿಲ್ಮ್ ಚೇಂಬರ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಒತ್ತಾಯ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಫಿಲ್ಮ್ ಚೇಂಬರ್ ತುರ್ತುಸಭೆ ನಡೆಸಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ
Vishwanath S
Updated On : 13 Jun 2024, 7:43 pm

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಒತ್ತಾಯ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಫಿಲ್ಮ್ ಚೇಂಬರ್ ತುರ್ತುಸಭೆ ನಡೆಸಿತ್ತು.

ಇನ್ನು ಸಭೆಯಲ್ಲಿ ದರ್ಶನ್ ಅವರನ್ನು ಚಿತ್ರರಂಗದಿಂದ ಬಹಿಷ್ಕರಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ದರ್ಶನ್ ಕನ್ನಡ ಚಿತ್ರರಂಗದ ದೊಡ್ಡ ನಟ. ಬಹಿಷ್ಕಾರ ಕುರಿತಂತೆ ಸದ್ಯಕ್ಕೆ ಯಾವುದೇ ನಿರ್ಧಾರಕೈಗೊಂಡಿಲ್ಲ. ಆದರೆ ದರ್ಶನ್ ಎಸಗಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಆರೋಪ ಸಾಬೀತಾದರೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ಎಂ ಸುರೇಶ್ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆಯನ್ನು ತೀವ್ರವಾಗಿ ಖಂಡಿಸುವ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೃತನ ಕುಟುಂಬಸ್ಥರ ಪರವಾಗಿ ನಿಂತಿದೆ. ಪ್ರಸ್ತುತ ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಬೇಕಿದೆ. ಹೀಗಾಗಿ ನಾಳೆ ಫಿಲ್ಮ್ ಚೇಂಬರ್ ನ ಪದಾಧಿಕಾರಿಗಳು ಚಿತ್ರದುರ್ಗಕ್ಕೆ ತೆರಳಿ ಕುಟುಂಸ್ಥರಿಗೆ ಸಾಂತ್ವನ ಹೇಳುವುದರ ಜೊತೆಗೆ ಕುಂದುಕೊರತೆಯನ್ನು ಆಲಿಸುತ್ತೇನೆ ಎಂದರು.

Advertisement

Advertisement

Also Read

ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್?: ತುರ್ತು ಸಭೆ ಕರೆದ ಕರ್ನಾಟಕ ಫಿಲ್ಮ್ ಚೇಂಬರ್!

ಕೊಲೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಲ್ಲದೆ ದರ್ಶನ್​ ಅವರನ್ನು ರಕ್ಷಿಸುವ ಪ್ರಮೇಯವೆ ಇಲ್ಲ. ಕೊಲೆ ಎಂಬುದು ತುಂಬಾ ಸೂಕ್ಷ್ಮ ವಿಚಾರವಾಗಿದೆ. ಕಾನೂನಿನಡಿ ಪೊಲೀಸರು ತನಿಖೆ ನಡೆಸುತ್ತಿದ್ದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ದರ್ಶನ್​ ಅವರನ್ನು ಬ್ಯಾನ್​ ಮಾಡುವ ವಿಚಾರವನ್ನು ಕಲಾವಿದರ ಸಂಘ ಎಲ್ಲರೂ ಸೇರಿ ಚರ್ಚಿಸಿ, ಮುಂದಿನ ನಾಲ್ಕೈದು ದಿನಗಳಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments